ಕಳಸ : (ನ್ಯೂಸ್ ಮಲ್ನಾಡ್ ವರದಿ) ಕಳಸದ ಮೊಬೈಲ್ ಅಂಗಡಿಯೊಂದರಲ್ಲಿ ಮೊಬೈಲ್ ಕಳ್ಳತನ ನಡೆಸಿದ್ದ ಆರೋಪಿಯನ್ನು ಕಾರ್ಯಾಚರಣೆಯ ಮೂಲಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ : ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಮುಸ್ಲಿಂ ಜೋಡಿ, ಹೆರಿಗೆಯಾದ ಐದೇ ದಿನಕ್ಕೆ ಯುವತಿ ಸಾವು
ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಹಾವೀರ ರಸ್ತೆಯ ಮೊಬೈಲ್ ಫೋನ್ ಅಂಗಡಿಯಲ್ಲಿ ಕಳೆದವಾರ ಮೊಬೈಲ್ ಕಳ್ಳತನ ನಡೆಸಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಆಧರಿಸಿ ಹಾಗೂ ಕಳವಾದ ಮೊಬೈಲ್ ಫೋನ್ಗಳ IMEI ಸಂಖ್ಯೆಯನ್ನು ಆಧರಿಸಿ ಕಳ್ಳನನ್ನು ಪತ್ತೆ ಹಚ್ಚುವ ಸಲುವಾಗಿ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು.
ಅಂತೆಯೇ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಾಲರಾಜ್ ಎಂದು ಗುರುತಿಸಲಾಗಿದೆ. ಈತನನ್ನು ಸಕಲೇಶಪುರದಲ್ಲಿ ಬಂಧಿಸಲಾಗಿದ್ದು ಕ್ರಿಮಿನಲ್ ಹಿನ್ನೆಲೆಯೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಧಿತನಿಂದ ಆರು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ.
ಈ ಕಾರ್ಯಾಚರಣೆಯು ಇನ್ಸ್ಪೆಕ್ಟರ್ ರಮೇಶ್ ಮತ್ತು ಸಬ್ಇನ್ಸ್ಪೆಕ್ಟರ್ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ಜಯಕುಮಾರ್, ಪ್ರದೀಪ್, ಶಿವಕುಮಾರ್ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

0 Comments