ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಬಸ್ ನಿಲ್ದಾಣದ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶೃಂಗೇರಿಯ ನಿವಾಸಿ ಆಟೋ ರವಿ (ಟೈಸನ್) ಎಂದೇ ಚಿರ ಪರಿಚಿತರಾಗಿದ್ದ ರವಿ ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಸಮಯದಲ್ಲಿ ಪಟ್ಟಣಕ್ಕೆ ಹೊಂದಿಕೊಂಡಿರುವ ಬಸ್ ನಿಲ್ದಾಣದ ಹಿಂದಿನ ತಿರುವಿನಲ್ಲಿ ಆಟೋ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ ರವಿ ಭೀಕರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡುವ ಸಲುವಾಗಿ ಎಲ್ಲಾ ವ್ಯವಸ್ಥೆಗಳನ್ನು ಸ್ಥಳೀಯರು ಮಾಡಿದರೂ ಕೂಡ ತೀವ್ರವಾಗಿ ಗಾಯಗೊಂಡಿದ್ದ ರವಿ ಕೊನೆಉಸಿರೆಳೆದಿದ್ದಾರೆ.
ಮೃತರು ಕುಟುಂಬವರ್ಗ ಹಾಗೂ ಅಪಾರ ಸಂಖ್ಯೆಯ ಗೆಳೆಯರನ್ನು ಅಗಲಿದ್ದು ಈ ಕುರಿತು ಶೃಂಗೇರಿಯ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಮೃತದೇಹ ಶೃಂಗೇರಿಯ ಸರ್ಕಾರಿ ಆಸ್ಪತ್ರೆಯಲ್ಲಿದು ಮರಣೋತ್ತರ ಪರೀಕ್ಷೆಯ ಬಳಿಕದಲ್ಲಿ ವೈದ್ಯರು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.






0 Comments