ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟ ಜಾಗದ ಮೇಲೆ ರೇಡ್ ಮಾಡಿದ ಎಸಿಬಿ ಅಧಿಕಾರಿಗಳು ಚಿನ್ನದ ಬಿಸ್ಕೆಟ್, ಹಣ ಮುಂತಾದವುಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರಿನ PWD ಇಲಾಖೆಯ ಅಧಿಕಾರಿ ಗವಿರಂಗಪ್ಪ ಅವರ ಮನೆಯ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹ ಮಾಡಲಾಗಿದ್ದ ಅಪಾರ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. 750 ಗ್ರಾಂ ಚಿನ್ನದ ಗಟ್ಟಿ, 900 ಗ್ರಾಂ ಬೆಳ್ಳಿ, 2.74 ಲಕ್ಷ ರೂಪಾಯಿ ನಗದು ಈ ವರೆಗೆ ಪತ್ತೆಯಾಗಿದೆ. ಅಧಿಕಾರಿಗಳು ದಾಳಿಯನ್ನು ಮುಂದುವರೆಸಿದ್ದು ಇನ್ನೂ ಹೆಚ್ಚಿನ ಮೌಲ್ಯದ ವಸ್ತುಗಳು ದೊರೆಯುವ ಸಂಭವವಿದೆ.
ಇಂದು ಮುಂಜಾನೆ ಆರು ಗಂಟೆಯಿಂದ ಅಧಿಕಾರಿಗಳು ದಾಳಿ ನಡೆಸಲು ಆರಂಭಿಸಿದ್ದು ಸೂಕ್ಷ್ಮವಾಗಿ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಇನ್ನೂ ಮುಂದುವರೆಯುವ ಸಾಧ್ಯತೆಗಳಿದ್ದು ಸಂಪೂರ್ಣ ಪರಿಶೀಲನೆಯ ನಂತರ ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

0 Comments