ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶೃಂಗೇರಿ ಘಟಕದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿದು ಸ್ವಚ್ಛತಾ ಕಾರ್ಯವನ್ನು ಮಾಡುವ ಮೂಲಕ ಸೇವಾ ಚಟುವಟಿಕೆಯನ್ನು ಮಾಡಿದ್ದಾರೆ.

ಇದನ್ನೂ ಓದಿ : ಶೃಂಗೇರಿ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಮಾಡಿದ್ದ ಬೇಲಿಯನ್ನು ತೆರವುಗೊಳಿಸಿದ ಗ್ರಾಮ ಪಂಚಾಯತ್ ಅಧಿಕಾರಿಗಳು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಂದೋಡಿ ಇಲ್ಲಿನ ಶಾಲೆಗೆ ಸುಣ್ಣ ಬಣ್ಣ ಬಳಿಯುವ ಮೂಲಕ ಸೇವಾ ಚಟುವಟಿಕೆಯನ್ನು ಮಾಡಿದ್ದಾರೆ. ಶಾಲೆಯ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಿ ಶಾಲೆಗೆ ಉತ್ತಮ ಕಳೆಯನ್ನು ತಂದಿದ್ದಾರೆ. 

ಸೇವಾಕಾರ್ಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡುವುದು ವಿದ್ಯಾರ್ಥಿ ಪರಿಷತ್ ನ ಕಾರ್ಯವಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ತಿಳಿಸಿದ್ದಾರೆ. ಈ ಕಾರ್ಯದಲ್ಲಿ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರೊಂದಿಗೆ ಸ್ಥಳೀಯರು ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವಾಕಾರ್ಯಗಳ ಯೋಜನೆಯನ್ನು ರೂಪಿಸಿಕೊಂಡಿರುವುದಾಗಿ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ತಿಳಿಸಿದರು.