ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅನೇಕ ತಿಂಗಳುಗಳಿಂದ ತಲೆನೋವಾಗಿ ಪರಿಣಮಿಸಿದ್ದ ಹಿಜಾಬ್ ಹಾಗೂ ಕೇಸರಿ ಶಾಲಿನ ನಡುವಿನ ಸಮರಕ್ಕೆ ನಿನೆಯಷ್ಟೇ ಹೈಕೋರ್ಟ್ ತೀರ್ಪು ನೀಡಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಆದೇಶ ನೀಡಿದ್ದರು ಕೂಡ ಇಂದು ವಿದ್ಯಾರ್ಥಿನಿಯರು ಮತ್ತೆ ಖ್ಯಾತೆ ತೆಗೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಐ.ಡಿ.ಎಸ್.ಜಿ ಕಾಲೇಜಿನ ವಿದ್ಯಾರ್ಥಿನಿಯರು ಹೈಕೋರ್ಟ್ ತೀರ್ಪಿಗೆ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಇಂದು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು. ಕಾಲೇಜಿಗೆ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಪ್ರವೇಶ ಮಾಡಲು ಬಿಡದೇ ಇದ್ದಾಗ ಕಾಲೇಜ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಇಂದು ನಡೆಯುತ್ತಿದ್ದ ಆಂತರಿಕ ಪರೀಕ್ಷೆಯನ್ನೂ ಬಹಿಷ್ಕಾರ ಮಾಡಿ 22 ವಿದ್ಯಾರ್ಥಿನಿಯರು ಕಾಲೇಜಿನಿಂದ ತೆರಳಿದ್ದಾರೆ. ನಮಗೆ ನ್ಯಾಯ ದೊರೆತಿಲ್ಲ ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಹ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.
ಇಷ್ಟು ದಿನಗಳ ಕಾಲ ಗೊಂದಲಮಯ ವಾತಾವರಣ ನಿರ್ಮಾಣ ಮಾಡಿದ್ದ ಹಿಜಾಬ್ ವಿವಾದ ಹೈಕೋರ್ಟ್ ತೀರ್ಪಿನ ನಂತರವೂ ಶಮನ ಆಗದೇ ಇರುವುದು ಸಾರ್ವಜನಿಕರಲ್ಲಿ ಗೊಂದಲದ ವಾತಾವರಣ ನಿರ್ಮಾಣ ಮಾಡಿದೆ.
ತನು ಕೊಟ್ಟಿಗೆಹಾರ, ವರದಿಗಾರರು

0 Comments