ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಯುವಕನನ್ನು ಚಿಕ್ಕಮಗಳೂರು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಅಡಿಕೆ ಬೆಳೆ ನಿಷೇಧ ವಿಚಾರ : ಅಡಿಕೆ ಬೆಳೆಗಾರರಿಗೆ ಶುಭ ಸುದ್ದಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಚಾನಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಬಸವನಹಳ್ಳಿ ಪೊಲೀಸರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದು ಈ ಕುರಿತು ಸದಾ ಕಾರ್ಯಾಚರಣೆ ಕೈಗೊಂಡು ಯುವಶಕ್ತಿಯನ್ನು ಸರಿದಾರಿಗೆ ತರುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು ಡ್ರಗ್ಸ್ ಗಾಂಜಾ ಸೇರಿದಂತೆ ನಶೆ ಭರಿಸುವ ವಸ್ತುಗಳ ವಿರುದ್ಧದ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಈ ಕುರಿತು ಪೊಲೀಸ್ ಇಲಾಖೆ ನಿರಂತರವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು.
ಆರೋಪಿಯನ್ನು PSI ಬಸವನಹಳ್ಳಿ ನೇತೃತ್ವದ ಪೊಲೀಸರು ಬಂಧಿಸಿದ್ದು ಬಂಧಿತನಿಂದ 344 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.





0 Comments