ಬಾಳೆಹೊನ್ನೂರು : (ನ್ಯೂಸ್ ಮಲ್ನಾಡ್ ವರದಿ) ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಅಂಗವಾಗಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದೆ.
ಇದನ್ನೂ ಓದಿ : ತುಂಗಾ ನದಿಯಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ಯುವಕ, ಮೀನು ಹಿಡಿಯಲು ಹೋಗಿ ಸಾವನ್ನಪ್ಪಿರುವ ಶಂಕೆ
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಅಂಗವಾಗಿ ಇಂದು ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿಯ ರಥೋತ್ಸವ ಜರುಗಲಿದೆ.
ಈ ಕಾರ್ಯಕ್ರಮಕ್ಕೆ ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ರಾಘವೇಂದ್ರ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಹಾಗೂ ಸ್ವಾಮೀಜಿಗಳು ಉಪಸ್ಥಿತರಿರಲಿದ್ದಾರೆ.
ನಿನ್ನೆ ರಂಭಾಪುರಿ ಪೀಠದ ಡಾ.ವೀರ ಸೋಮೇಶ್ವರ ಜಗದ್ಗುರುಗಳು ಪಂಚಾಚಾರ್ಯ ಧರ್ಮ ಧ್ವಜಾರೋಹಣ ನೆರವೇರಿಸಿದರು. ಧ್ವಜಸ್ತಂಭಕ್ಕೆ ಪೂಜೆ ಪುನಸ್ಕಾರಗಳನ್ನು ನೆರವೇರಿಸಿ ಭಕ್ತರಿಗೆ ಆಶೀರ್ವಚನ ನೀಡಿದರು.
ನಾಳೆ ಮುಖ್ಯಮಂತ್ರಿಗಳು ಸೇರಿದಂತೆ ಇನ್ನಿತರ ಗಣ್ಯರು ಆಗಮಿಸುವ ಸಲುವಾಗಿ ಭದ್ರತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು ಹಾಗೂ ಅಗತ್ಯ ಭದ್ರತಾ ಕಾರ್ಯಗಳನ್ನು ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ್ ಹಾಜರಿದ್ದರು. ಶ್ರೀಗಳ ಆಶೀರ್ವಾದ ಪಡೆದರು, ಈ ಸಂದರ್ಭದಲ್ಲಿ ಅವರೊಂದಿಗೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

0 Comments