ರಾಜ್ಯ : (ನ್ಯೂಸ್ ಮಲ್ನಾಡ್ ವರದಿ) ಮಹಾರಾಷ್ಟ್ರದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯ ನೀಡಿದೆ. 

ಇಂದಿನಿಂದ ಮಾರ್ಚ್ 28 ರವರೆಗೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಲೆನಾಡಿನ ಸುತ್ತಮುತ್ತಲಿನ ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು ಕರಾವಳಿ ಭಾಗಗಳಾದ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ಮಲೆನಾಡಿನ ಚಿಕ್ಕಮಗಳೂರು,ಶಿವಮೊಗ್ಗ, ಹಾಸನ ಜಿಲ್ಲೆಯಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ ಮಲೆನಾಡಿನಲ್ಲಿ ಸಂಭವಿಸಿದ ಮಳೆಗೆ ಅಲ್ಲಲ್ಲಿ ಕೆಲವು ಅವಘಡಗಳು ಸಂಭವಿಸಿದ್ದು ಕೆಲವೆಡೆಗಾಳಿಗೆ ಮರಗಳು ಉದುರಿ ಬಿದ್ದು ವಿದ್ಯುತ್ ಕಂಬಗಳು ನಾಶಗೊಂಡಿದೆ. 

ಜನರು ಇಲಾಖೆಯ ಮುನ್ನೆಚ್ಚರಿಕೆಯನ್ನು ಪಾಲಿಸಿಕೊಂಡು ಸುರಕ್ಷತೆ ಕಡೆಗೆ ಹೆಚ್ಚಿನ ಗಮನಹರಿಸಬೇಕೆಂದು ಅಧಿಕಾರಿಗಳು ಕೋರಿದ್ದಾರೆ.