ಮೂಡಿಗೆರೆ : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಮಲೆನಾಡು ಹಾಗೂ ದಕ್ಷಿಣ ಕನ್ನಡವನ್ನು ಸಂಪರ್ಕಿಸುವ ಮಾರ್ಗವಾದ ಚಾರ್ಮಾಡಿ ಘಾಟ್ ನಲ್ಲಿ ಪತ್ತೆಯಾಗಿ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ದೊರೆತಿದೆ. 

ಈ ಕುರಿತು ಬಣಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದು ಶವವನ್ನು ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಈ ಸಂಬಂಧ ಪೊಲೀಸರು ಮಾಹಿತಿ ಕಲೆ ಹಾಕಲು ಆರಂಭಿಸಿದ್ದು. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ತನು ಕೊಟ್ಟಿಗೆಹಾರ, ವರದಿಗಾರರು

ಇದನ್ನೂ ಓದಿ : ಶೃಂಗೇರಿ: ನಿಯಂತ್ರಣ ತಪ್ಪಿ ಉರುಳಿದ ಆಟೋ ; ಸ್ಥಳದಲ್ಲೇ ಸಾವನ್ನಪ್ಪಿದ ಚಾಲಕ