ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಕೊಪ್ಪದ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿಯ ಇದಿನಬ್ಬ ಇಸ್ಮಾಯಿಲ್ ಹಾಗೂ ಉಪಾಧ್ಯಕ್ಷರಾಗಿ ಗಾಯತ್ರಿ ವಸಂತ್ ಅವಿರೋಧವಾಗಿ ಆಯ್ಕೆಯಾಗಿದ್ದರು.
ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಅನೇಕ ಪ್ರಮುಖ ಮುಖಂಡರು ಸಹ ಹಾಜರಿದ್ದರು ಆದರೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಆಗಿ ಸುದ್ದಿ ಹೊರಬೀಳುತ್ತಿದ್ದಂತೆಯೇ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಸಹ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡುತ್ತಿದೆ, ಸಾಮಾನ್ಯ ಕಾರ್ಯಕರ್ತರು ಸಿದ್ದಾಂತದ ಹೆಸರಿನಲ್ಲಿ ಕೇಸ್ ಹಾಕಿಕೊಳ್ಳುವುದು ಆದರೆ ಅಧಿಕಾರವನ್ನು ನೀಡುವಾಗ ಓಲೈಕೆ ರಾಜಕಾರಣ ಮಾಡುವುದು ಎಂದು ಟೀಕಿಸಿದ್ದಾರೆ. ಇಂತಹ ಓಲೈಕೆ ರಾಜಕಾರಣದಿಂದಲೇ ಪಕ್ಷ ಹಾಳಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಅಡುಗೆ ಎಣ್ಣೆ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಕೆ. ಎನ್ ರಮೇಶ್
ಬಿಜೆಪಿ ಲೆಕ್ಕಾಚಾರ: ಕೊಪ್ಪ ಪಟ್ಟಣದ ಕೆಲವು ವಾರ್ಡ್ ಗಳಲ್ಲಿ ಅಲ್ಪಸಂಖ್ಯಾತರ ಮತಗಳೇ ನಿರ್ಣಾಯಕ, ಇಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಕೆಲಸದ ಮೂಲಕ ಪಕ್ಷ ತನ್ನ ಹಿಡಿತ ಸಾಧಿಸಿಕೊಂಡು ಬಂದಿದೆ. ಆದಕಾರಣ ಅಧ್ಯಕ್ಷ ಸ್ಥಾನಕ್ಕೆ ಅಲ್ಪಸಂಖ್ಯಾತರನ್ನೇ ನೇಮಕ ಮಾಡುವ ಮೂಲಕ ಕೊಪ್ಪ ಪಟ್ಟಣ ಪಂಚಾಯಿತಿ ಗದ್ದುಗೆಯನ್ನು ಮೊದಲ ಬಾರಿಗೆ ಸಮುದಾಯಕ್ಕೆ ನೀಡುವ ಮೂಲಕ ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಅಲ್ಲ ಎಂಬ ಸಂದೇಶ ನೀಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಂತಿದೆ.

0 Comments