ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ರಸ್ತೆಯಿಂದ ಬೇರೆಡೆಗೆ ಚಲಿಸಿದ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಚಿಕ್ಕಮಗಳೂರು : ಪ್ರತ್ಯೇಕ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರ ದುರ್ಮರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಬಳಿಯಲ್ಲಿ ಈ ಅವಘಡ ಸಂಭವಿಸಿದ್ದು ಹೊರನಾಡು ಕಡೆಯಿಂದ ಬೆಂಗಳೂರಿನ ಕಡೆಗೆ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ನ ಒಂದು ಚಕ್ರ ಅಲ್ಲೇ ಸಮೀಪವಿದ್ದ ಸೇತುವೆಯ ಕೆಳಗಿಳಿದಿದೆ. 


ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ 30 ಜನ ಪ್ರಯಾಣಿಕರು ಪ್ರಯಾಣ ನಡೆಸುತ್ತಿದ್ದರು ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ ಸಂಚಾರ ಮಾಡುತ್ತಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತನು ಕೊಟ್ಟಿಗೆಹಾರ,ವರದಿಗಾರರು