ಹಾಸನ :(ನ್ಯೂಸ್ ಮಲ್ನಾಡ್ ವರದಿ) ಹಲ್ಲಿ ಬಿದ್ದಿದ್ದ ಬಿಸಿಯೂಟವನ್ನು ಸೇವಿಸಿ ಅನೇಕ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಇದನ್ನೂ ಓದಿ : ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಶಾಂತಿಯನ್ನು ಬಿಜೆಪಿ ಕದಡುತ್ತಿದೆ : ಕಿಮ್ಮನೆ ರತ್ನಾಕರ್ ವಾಗ್ದಾಳಿ
ಹಾಸನದ ಅರಸೀಕೆರೆ ತಾಲ್ಲೂಕಿನಲ್ಲಿ ಹಲ್ಲಿ ಬಿದ್ದಿದ್ದ ಬಿಸಿಯೂಟವನ್ನು ಸೇವಿಸಿ 34 ಜನ ಮಕ್ಕಳು ಅಸ್ವಸ್ಥರಾಗಿದ್ದರು, ತಕ್ಷಣ ಎಲ್ಲಾ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಅಗತ್ಯವಿರುವ ಔಷದೋಪಚಾರ ಮಾಡಿ ಮಕ್ಕಳನ್ನು ಸುರಕ್ಷಿತವಾಗಿರಿಸಲಾಗಿದೆ ಎಂದು ಹಾಸನದ ಜಿಲ್ಲಾಧಿಕಾರಿಗಳಾದ ಆರ್ ಗಿರೀಶ್ ಮಾಹಿತಿ ನೀಡಿದ್ದಾರೆ.
ಎಂದಿನಂತೆಯೇ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ನೀಡಲಾಗಿತ್ತು, ಹಲ್ಲಿಯ ಬಾಲ ಊಟದಲ್ಲಿ ಬಿದ್ದಿರುವುದು ಮಕ್ಕಳ ಗಮನಕ್ಕೆ ಬಂದಿದೆ ತಕ್ಷಣ ಮಕ್ಕಳು ಶಾಲೆಯ ಶಿಕ್ಷಕರಿಗೆ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಶಿಕ್ಷಕರು ಮಕ್ಕಳು ಊಟ ಮಾಡುವುದನ್ನು ತಡೆದಿದ್ದಾರೆ ಈ ಕಾರಣದಿಂದಾಗಿ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ.
ತಡಮಾಡದೆ ಎಲ್ಲ ಮಕ್ಕಳನ್ನು ಶಿಕ್ಷಕರು ಆಸ್ಪತ್ರೆಗೆ ದಾಖಲು ಮಾಡಿ ಅಗತ್ಯ ಚಿಕಿತ್ಸೆ ಪಡೆದುಕೊಳ್ಳುವಂತೆ ಮಾಡಿದ್ದಾರೆ. ಪ್ರಸ್ತುತ ಎಲ್ಲಾ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಕ್ಕಳ ಆರೋಗ್ಯದ ಕುರಿತಾಗಿ ಆತಂಕ ವ್ಯಕ್ತಪಡಿಸಿದ್ದ ಪೋಷಕರು ಇದೀಗ ನಿಟ್ಟುಸಿರುಬಿಟ್ಟಿದ್ದಾರೆ.






0 Comments