ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಇದನ್ನೂ ಓದಿ : ಶೃಂಗೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ನಿಶ್ಮಿತ ಬಸ್ ಪಲ್ಟಿ 20 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ಈ ಭೀಕರ ರಸ್ತೆ ಅಪಘಡ ಸಂಭವಿಸಿದ್ದು ಕಾರ್ಯಕ್ರಮಕ್ಕೆ ತೆರಳಿದ್ದ ಅನೇಕರಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.


ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನವು ರಭಸವಾಗಿ ಮರಕ್ಕೆ ಗುದ್ದಿದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು ಮೂವರು ಸ್ಥಳದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 57 ವರ್ಷ ಪ್ರಾಯದ ತವನಂದಿ ಗ್ರಾಮದ ಯೋಗ ರಾಜಪ್ಪ ನಿಂಗಪ್ಪ,13 ವರ್ಷ ಪ್ರಾಯದ ಬಾಲಕ ಆಕಾಶ್ ಹನುಮಂತಪ್ಪ, 45ವರ್ಷ ಪ್ರಾಯದ ತಿಮ್ಮಪ್ಪ ಈರಪ್ಪ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಇನ್ನೂ ಅನೇಕರು ಗಾಯಗೊಂಡಿದ್ದು ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇನ್ನು ಕೆಲವರು ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕಾರ್ಯಕ್ರಮಕ್ಕೆ ತೆರಳಿದ ಈ ಎಲ್ಲರೂ ಭೋಜನವನ್ನು ಮುಗಿಸಿ ಆನವಟ್ಟಿ - ಸೊರಬ ರಸ್ತೆಯ ಚಿತ್ರಟ್ಟಹಳ್ಳಿ ಗ್ರಾಮದ ಸಮೀಪ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡ ಪರಿವಾರದವರು ಅತ್ಯಂತ ದುಃಖದ ಪರಿಸ್ಥಿತಿಯಲ್ಲಿದ್ದು ಅತೀವವಾದ ನೋವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅನೇಕ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು ಚಾಲಕರು ಹೆಚ್ಚಿನ ಜಾಗರೂಕತೆಯನ್ನು ವಹಿಸಿ ವಾಹನಗಳಲ್ಲಿ ಸಂಚಾರ ಮಾಡಬೇಕೆಂದು ತಿಳಿಸಲಾಗಿದೆ ಅಂತೆಯೇ ನಿನ್ನೆ ಶೃಂಗೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ನಿಶ್ಮಿತ ಮೋಟರ್ಸ್ ನ ಬಸ್ ಉರುಳಿದ ಪರಿಣಾಮ ಅನೇಕರು ಗಾಯಗೊಂಡಿರುವ ಘಟನೆ ನಡೆದಿದೆ .

ಮಂಗಳೂರು- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಪೆಟ್ರೋಲ್‌ ಪಂಪ್‌ ಎದುರು ಬುಧವಾರ ರಾತ್ರಿ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶೃಂಗೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಸೂರಲ್ಪಾಡಿ ಬಳಿ ಅಪಘಾತಕ್ಕೀಡಾಗಿದೆ.

ಭಾರೀ ಮಳೆಯಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್‌ನಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿದ್ದರು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಇತರ ಐದಾರು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಜಪೆ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ತುರ್ತು ಪರಿಹಾರ ಕಾರ್ಯ ಕೈಗೊಂಡಿದ್ದಾರೆ.