ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಜೀಪೊಂದು ಉರುಳಿ ಅನೇಕರು ಆಸ್ಪತ್ರೆಗೆ ದಾಖಲಾಗಿರುವ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ, ದೊಡ್ಡ ಮೊತ್ತದ ದಂಡ ವಿಧಿಸಿದ ಕೋರ್ಟ್
ಚಿಕ್ಕಮಗಳೂರಿನ ಪ್ರವಾಸಿ ತಾಣವಾದ ಚಂದ್ರದ್ರೋಣ ಪರ್ವತದ ಸಮೀಪದಲ್ಲಿರುವ ಅತ್ತಿಗುಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಒಂದು ಉರುಳಿದ ಪರಿಣಾಮ ಜೀಪಿನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ 11ಮಂದಿಗೆ ಪೆಟ್ಟಾಗಿದೆ.
ವಾಹನದಲ್ಲಿ ಪ್ರಯಾಣ ನಡೆಸುತ್ತಿದ್ದ ಪ್ರಯಾಣಿಕರು ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ. ವಾಹನದಲ್ಲಿ 15 ಜನರನ್ನು ತುಂಬಿಕೊಂಡು ಅಜಾಗರೂಕತೆಯಿಂದ ವಾಹನದ ಚಾಲಕ ವೇಗವಾಗಿ ವಾಹನವನ್ನು ಚಾಲನೆ ಮಾಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಜೀವನ ಹಿಂದಿದ್ದ ವಾಹನದ ಸವಾರರು ತಮ್ಮ ವಾಹನವನ್ನು ಅಪಘಾತಕ್ಕೀಡಾದವರಿಗೆ ಬಿಟ್ಟುಕೊಟ್ಟು ಆಸ್ಪತ್ರೆಗೆ ಸೇರಿಸುವಲ್ಲಿ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತವಾಗುತ್ತಿದ್ದಂತೆ ಚಾಲಕ ಎಸ್ಕೇಪ್ ಆಗಿದ್ದು ಈ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಜೀಪಿನಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ.





0 Comments