ಹರಿಹರಪುರ : (ನ್ಯೂಸ್ ಮಲ್ನಾಡ್ ವರದಿ) ಕಳೆದ 12 ದಿನಗಳಿಂದ ಹರಿಹರಪುರ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠಮ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ಕಾರ್ಯಕ್ರಮದಲ್ಲಿ ಇಂದೂ ಕೂಡ ಧಾರ್ಮಿಕ ಕಾರ್ಯಗಳು ನೆರವೇರಿತು.
ಇದನ್ನೂ ಓದಿ : 15 ವರ್ಷಗಳಿಂದ ಆಸ್ಪತ್ರೆ ಕಾಮಗಾರಿ ಪ್ರಗತಿಯಲ್ಲಿದೆ, ನಿಧಾನವಾಗಿ ಚಲಿಸಿ ! ಮುಖ್ಯಮಂತ್ರಿಗೆ ಶುಭಕೋರಿ ಬ್ಯಾನರ್ ಹಾಕಿದ ಶೃಂಗೇರಿ ಜನ
ಇಂದು ಶ್ರೀ ಮಠದಲ್ಲಿ ಸಹಸ್ರ ಚಂಡಿಕಾ ಮಹಾಯಾಗದ ಪೂರ್ಣಾಹುತಿ, ಕೋಟಿ ಕುಂಕುಮಾರ್ಚನೆಯ ಮಂಗಲೋತ್ಸವ ಹಾಗೂ ಜಗದ್ಗುರು ಶ್ರೀ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾ ಸ್ವಾಮಿಗಳು ಭಕ್ತರಿಗೆ ಆಶೀರ್ವಚನ ನೀಡಿದರು.
ಇಂದು ಶ್ರೀ ಮಠಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ತೇಜಸ್ವಿ ಸೂರ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕ ಮುಖಂಡರು ಆಗಮಿಸಿ ದೇವರ ದರ್ಶನ ಪಡೆದು ಶ್ರೀಗಳ ಕೃಪೆಗೆ ಪಾತ್ರರಾದರು. ನಿನ್ನೆ ಶ್ರೀ ಮಠಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆ ಆಗಮಿಸಿದ್ದರು ಈ ಸಂದರ್ಭದಲ್ಲೂ ಕೂಡ ಅನೇಕರು ಉಪಸ್ಥಿತರಿದ್ದರು.
ನಿನ್ನೆ ಹಾಗೂ ಇಂದು ಎರಡು ದಿನಗಳ ಕಾಲ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಮಠದ ಆವರಣದಲ್ಲಿ ನಡೆದಿದ್ದು ನಾಳೆ ದಿನಾಂಕ 23 ಏಪ್ರಿಲ್ 2022 ರ ಶನಿವಾರದಂದು ರುದ್ರಹೋಮ ಹಾಗೂ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣೋತ್ಸವ ನಡೆಯಲಿದೆ. ಇಂದು ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಆಗಮಿಸಿದ್ದು ಬರುವ ಯಾತ್ರಾರ್ಥಿಗಳಿಗೆ ಭಕ್ತರಿಗೆ ಎಲ್ಲಾ ವ್ಯವಸ್ಥೆಗಳನ್ನು ಶ್ರೀ ಮಠದ ವತಿಯಿಂದ ಕಲ್ಪಿಸಲಾಗಿತ್ತು.
ಇಂದು ಭಕ್ತಾದಿಗಳಿಗೆ ಆಶೀರ್ವಚನ ನೀಡಿದ ಶ್ರೀಗಳು ಶ್ರೇಷ್ಟತೆಯನ್ನು ಸಮರ್ಪಣೆ ಹಾಗೂ ಜ್ಞಾನದ ಮೂಲಕ ಪಡೆಯಬಹುದು ಹಿಂದೂ ಸನಾತನ ಧರ್ಮದ ಮಹತ್ವವನ್ನು ಇಡೀ ವಿಶ್ವಕ್ಕೇ ಸಾರಬೇಕು. ಮನುಜರು ಜ್ಞಾನಾರ್ಜನೆಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಬೇಕು ತನ್ಮೂಲಕ ಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದರು ಹಾಗೂ ಸಮಸ್ತರಿಗೂ ಒಳಿತಾಗಲಿ ಎಂದು ಆಶೀರ್ವದಿಸಿದರು. ಈ ಸಭೆಗೆ ಅನೇಕ ಸಂಖ್ಯೆಯಲ್ಲಿ ಭಕ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಎಂದಿನಂತೆ ಇಂದೂ ಕೂಡ ಶ್ರೀ ಮಠದ ಆವರಣದಲ್ಲಿ ನಾಡಿನ ಶ್ರೇಷ್ಟ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಇನ್ನೆರಡು ದಿನಗಳ ಧಾರ್ಮಿಕ ಕಾರ್ಯಕ್ರಮದ ಬಳಿಕ ಈ ಐತಿಹಾಸಿಕ ಮಹಾ ಕುಂಭಾಭಿಷೇಕ ಮಹೋತ್ಸವವು ಸಂಪನ್ನವಾಗಲಿದೆ.
ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಚಿಕ್ಕಮಗಳೂರು : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆ ಚಿಕ್ಕಮಗಳೂರಿನ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭೇಟಿ ನೀಡಿ ಪರೀಕ್ಷಾ ಕೊಠಡಿಗಳ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಬಾರಿ 9671 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಚಿಕ್ಕಮಗಳೂರು ನಗರದ ಜೂನಿಯರ್ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ಕೊಠಡಿಗಳ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ವೃದ್ಧಿಸುವಂತೆ ಮಾತನಾಡಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಒಳಿತಾಗಲಿ ಎಂದು ಶುಭ ಹಾರೈಸಿದರು.
ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಅಲ್ಲಿನ ಸಿಬ್ಬಂದಿಗಳ ಜೊತೆಗೆ ಮಾತನಾಡಿದ ಅವರು ಯಶಸ್ವಿಯಾಗಿ ಈ ಪರೀಕ್ಷೆಯನ್ನು ನಿರ್ವಹಣೆ ಮಾಡುವಂತೆ ಸೂಚಿಸಿದರು ಹಾಗೂ ಅವರ ಅವಶ್ಯಕತೆಗಳ ಕುರಿತು ಆಲಿಸಿದರು.
ಈ ಬಾರಿ 4597 ಬಾಲಕರು ಹಾಗೂ 5074 ಬಾಲಕಿಯರು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಹದಿನೆಂಟು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ರಾಜ್ಯದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರೊಂದಿಗೆ ಜಿಲ್ಲಾಧಿಕಾರಿಗಳಾದ ಕೆ.ಎನ್ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಸೇರಿದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದರು.


.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)


0 Comments