ಶಿವಮೊಗ್ಗ :(ನ್ಯೂಸ್ ಮಲ್ನಾಡ್ ವರದಿ) ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ 40% ಕಮೀಷನ್ ಆರೋಪಿ ಈಶ್ವರಪ್ಪ ರಾಜೀನಾಮೆ ನಿರ್ಧಾರ ತಿಳಿಸಿದ್ದಾರೆ. ನಾಳೆ ತಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.


ನಿನ್ನೆ ತಮ್ಮ ವಿರುದ್ದ ಕೇಳಿ ಬಂದಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ನಾನು ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡೋದಿಲ್ಲ ಎಂದು ಭಂಡತನ ತೋರಿದ್ದರು, ಆದರೆ ಈಗ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ

ಈಶ್ವರಪ್ಪ ರಾಜಿನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಇಂದಿನಿಂದ 24 ಗಂಟೆ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಿ, ಆ ನಂತರ ರಾಜ್ಯಾಧ್ಯಂತ ಹೋರಾಟಕ್ಕೆ ಕರೆ ನೀಡಲಾಗಿತ್ತು.

ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರರಾದ ಸಂತೋಷ್ ಪಾಟೀಲ್ ಸಾಯುವ ಮೊದಲು ಮಾಧ್ಯಮದವರಿಗೆ ವಾಟ್ಸ್ ಆಫ್ ಮೇಸಜ್ ಮಾಡಿ ನನ್ನ ಸಾವಿಗೆ ನೇರ ಕಾರಣ ಈಶ್ವರಪ್ಪ, ಹಾಗೂ ಅವರ ಪಿಎ ಬಸವರಾಜ್‌ ಹಾಗೂ ರಮೇಶ್ ಕಾರಣ ಎಂದು ಕಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು..