ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಕಾರಣ ಎಂಬ ಬಲವಾದ ಆರೋಪ ಕೇಳಿ ಬಂದ ಹಿನ್ನೆಲೆ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿದ್ದರು. ಅಂತೆಯೇ ಇಂದು ಸಂಜೆ ರಾಜೀನಾಮೆ ನೀಡಲು ಈಶ್ವರಪ್ಪ ಮುಂದಾಗಿರುವ ಮಾಹಿತಿ ಲಭ್ಯವಾಗಿದೆ. 

ಹರಿಹರಪುರ : ಮೈಮೇಲೆ ವಾಹನ ಹರಿದು ನರಳಾಡಿ ಸಾವನ್ನಪ್ಪಿದ ಹೆಬ್ಬಾವು

ಆದರೆ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಿ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರ ವಿರುದ್ಧವಾಗಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನ ಪ್ರಮುಖ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಧಿಕ್ಕಾರ ಕೂಗಿ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಪ್ರತಿಭಟನೆಯಲ್ಲಿ ಭಾಗಿಯಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಹಾಗೂ ಕೆ.ಎಸ್ ಈಶ್ವರಪ್ಪ ಅವರ ಅಭಿಮಾನಿಗಳು ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬಾರದು ಹಿಂಪಡೆಯಬೇಕೆಂದು ಆಗ್ರಹಿಸಿದರು. 

ಒಟ್ಟಾರೆ ರಾಜ್ಯ ರಾಜಕಾರಣದಲ್ಲಿ ಗೊಂದಲ ಉಂಟುಮಾಡಿರುವ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಒಂದೆಡೆ ಕೈ ನಾಯಕರು ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹ ವ್ಯಕ್ತಪಡಿಸುತ್ತಿದ್ದರೆ ಇನ್ನೊಂದೆಡೆ ಸಚಿವ ಕೆ.ಎಸ್ ಈಶ್ವರಪ್ಪ ನಾನು ಯಾವುದೇ ತಪ್ಪು ಮಾಡಿಲ್ಲ ಸುಳ್ಳು ಆರೋಪಗಳನ್ನು ನನ್ನಮೇಲೆ ಮಾಡಲಾಗಿದೆ. ಈ ಪ್ರಕರಣದಿಂದ ದೋಷ ಮುಕ್ತನಾಗಿ ಹೊರಬರುತ್ತೇನೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.