ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಮಾರುತಿ 800 ಕಾರೊಂದು ಉರುಳಿ ಮೂವರು ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ಈ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣ ಪುಟ್ಟ ಗಾಯಗಳಿಗೊಳಪಟ್ಟಿದ್ದಾರೆ.
ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ರಿಜಿಸ್ಟರ್ ಆಗಬಹುದು : https://forms.gle/PvypXpJerzDzsrfE9
ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿಯಿಂದ ಅಲ್ಲೇ ಇದ್ದ ಸಮೀಪದ ಗದ್ದೆಗೆ ಉರುಳಿದೆ ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ದೊಡ್ಡ ಮಟ್ಟದ ಹಾನಿಯಗದೇ ಸಣ್ಣ ಪುಟ್ಟ ಗಾಯಗಳಿಗೀಡಾಗಿದ್ದಾರೆ.
ಕಾರು ಪಲ್ಟಿಯಾಗಿ ಹೆದ್ದಾರಿಯಿಂದ ಗದ್ದೆಗೆ ಉರುಳುತ್ತಿದ್ದಂತೆಯೇ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರಿನಲ್ಲಿದ್ದವರನ್ನು ಮೇಲಕ್ಕೆತ್ತಿ ಅವರನ್ನು ಸುರಕ್ಷಿತವಾಗಿರಿಸುವಲ್ಲಿ ಸಹಾಯ ಮಾಡಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು





0 Comments