ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಲ್ಲಿ ನಾಳೆ ಯುಗಾದಿ ಹಬ್ಬದ ಅಂಗವಾಗಿ ಪ್ರಗತಿಪರ ಚಿಂತನೆ ಹೊಂದಿರುವ ಸರ್ವಧರ್ಮೀಯ ಸಮಾನ ಮನಸ್ಕರು ನಾಳೆ ಅಜಾದ್ ಪಾರ್ಕ್ ವೃತ್ತದ ಬಳಿ ಸಾಮರಸ್ಯದನಡಿಗೆ ಕಾರ್ಯಕ್ರಮವನ್ನು ಆಯೋಜನೆ ನಡೆಸುವುದಾಗಿ ತಿಳಿಸಿದ್ದಾರೆ.
ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ವೃತ್ತದ ಬಳಿ ಸಾಮರಸ್ಯದೆಡೆಗೆ ನಮ್ಮ ನಡಿಗೆ ಶೀರ್ಷಿಕೆಯಡಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಹೆಚ್.ಹೆಚ್ ದೇವರಾಜ್ ಹೇಳಿದರು. ಯುಗಾದಿ ಹಬ್ಬವಾದ ಏಪ್ರಿಲ್ 02 ರಂದು ಸರ್ವಧರ್ಮೀಯ ಸಮಾನ ಮನಸ್ಕರೊಂದಿಗೆ ಯುಗಾದಿ ಆಚರಿಸುವುದಾಗಿ ತಿಳಿಸಿದ್ದಾರೆ.
ಪ್ರಸ್ತುತ ಸರ್ಕಾರವು ರಾಜ್ಯದ ಜನರಲ್ಲಿ ಶಾಂತಿ ಹಾಗೂ ನೆಮ್ಮದಿ ಮೂಡಿಸುವ ಬದಲು ಅವರ ಭಾವನೆಗಳನ್ನು ಕೆರಳಿಸುತ್ತಿದೆ. ಜನರಿಗೆ ಪ್ರಜಾತಂತ್ರ ವ್ಯವಸ್ಥೆಮೇಲಿನ ದೃಢವಾದ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ. ಶಾಂತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಜವಾಬ್ಧಾರಿ ಶೂನ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಸಮಾಜದ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕಾದ ಜವಾಬ್ದಾರಿಹೊಂದಿರುವ ಸರ್ಕಾರ ಈ ರೀತಿಯ ಬೇಜವಾಬ್ದಾರಿ ನಡೆಯನ್ನು ನಡೆಸುವುದು ಸರಿಯಲ್ಲ. ಸರ್ಕಾರದ ವೈಫಲ್ಯವನ್ನು ತಡೆಯುವ ನಿಟ್ಟಿನಲ್ಲಿ ಹಿಂದೂ-ಮುಸಲ್ಮಾನರ ನಡುವೆ ಕೋಮುದ್ವೇಷ ಬಿತ್ತಿ ಜನರ ಜೀವನವನ್ನು ದುಸ್ತರಗೊಳಿಸುತ್ತಿದ್ದಾರೆ ಎಂದರು.
ವ್ಯಾಪಾರ ವಹಿವಾಟನ್ನು ಬೇರೆ ಧರ್ಮೀಯರೊಂದಿಗೆ ನಡೆಸಬೇಡಿ ಎಂದು ಜನಪ್ರತಿನಿಧಿಗಳು ಹೇಳಿಕೆ ನೀಡುತ್ತಿರುವುದು ಅತ್ಯಂತ ಖಂಡನೀಯ. ಈ ನಿಟ್ಟಿನಲ್ಲಿ ಯಾರಿಗೂ ಪ್ರಚೋದನೆ ನೀಡದೆ ದೇಶದ ಅಭಿವೃದ್ಧಿಗಾಗಿ, ಕೋಮು ಸೌಹಾರ್ದತೆಗಾಗಿ ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಆರ್ ರೇಣುಕಾರಾಧ್ಯ, ಡಿಎಸ್ಎಸ್ ನ ಮರ್ಲೆ ಅಣ್ಣಯ್ಯ, ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.





0 Comments