ಮಡಿಕೇರಿ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗೋಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಅಸ್ಸಾಂ ಕಾರ್ಮಿಕರನ್ನು ಭಜರಂಗದಳದ ಕಾರ್ಯಕರ್ತರು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ : 200 ಅನಾಥ ಶವಗಳ ಅಂತ್ಯ ಸಂಸ್ಕಾರ ಮಾಡಿದ ಪೊಲೀಸ್ ಕಾನ್ಸ್‌ಟೇಬಲ್ ಗೆ ಮುಖ್ಯಮಂತ್ರಿ ಪದಕ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಅಸ್ಸಾಂ ಕಾರ್ಮಿಕರು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಗೋಮಾಂಸವನ್ನು ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ಪೋಲೀಸರಿಗೊಪ್ಪಿಸಿದ್ದಾರೆ.

ಅಸ್ಸಾಂ ಮೂಲದ ಕಾರ್ಮಿಕರು ಗೋಮಾಂಸ ಸಾಗಾಟ ನಡೆಸುತ್ತಿರುವ ಕುರಿತಾಗಿ ಭಜರಂಗದಳದ ಕಾರ್ಯಕರ್ತರಿಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಕೂಡಲೇ ಎಚ್ಚೆತ್ತ ಕಾರ್ಯಕರ್ತರು ಕಾರ್ಯಾಚರಣೆಗಿಳಿದಿದ್ದಾರೆ, ಈ ಸಂದರ್ಭದಲ್ಲಿ ತಮ್ಮ ಬೈಕ್ ಮೂಲಕ ಗೋಮಾಂಸ ಸಾಗಾಟ ನಡೆಸುತ್ತಿದ್ದ ಅಸ್ಸಾಂ ಕಾರ್ಮಿಕರು ಸೆರೆಸಿಕ್ಕಿದ್ದಾರೆ. ಕೂಡಲೇ ಪೊಲೀಸರಿಗೆ ಈ ಕುರಿತು ವಿಚಾರ ತಿಳಿಸಿ ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ್ದಾರೆ. ಘಟನೆಯ ಕುರಿತು ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲುಮಾಡಿಕೊಂಡು ಆರೋಪಿಗಳ ವಿಚಾರಣೆ ಆರಂಭಿಸಿದ್ದಾರೆ. 


ಆರೋಪಿಗಳಿಗೆ ಕಾನೂನಿನ ಅಡಿಯಲ್ಲಿ ಸೂಕ್ತವಾದ ಕಠಿಣ ಶಿಕ್ಷೆಯಾಗಬೇಕೆಂದು ಭಜರಂಗದಳದ ಕಾರ್ಯಕರ್ತರು ಆಗ್ರಹಿಸಿದ್ದಾರೆ.