ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಪೊಲೀಸ್ ಪೇದೆಯೋರ್ವರು ಸಾವನ್ನಪ್ಪಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ದಫೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಬಿ ಪರಮೇಶ್ವರಪ್ಪ ಎಂಬ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ : ಜಯಪುರ : ಭೀಕರ ರಸ್ತೆ ಅಪಘಾತ ; ಓರ್ವ ಮಹಿಳೆ ಸಾವು ಇನ್ನೋರ್ವ ವ್ಯಕ್ತಿಯ ಸ್ಥಿತಿ ಗಂಭೀರ
ಪರಮೇಶ್ವರಪ್ಪ ಬಣಕಲ್ ಪೊಲೀಸ್ ಠಾಣೆಯಲ್ಲಿ ರಾತ್ರಿ ಹತ್ತು ಗಂಟೆಯ ವೇಳೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಎದೆ ನೋವಿನಿಂದ ಬಳಲಿ ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತ ಕೆ.ಬಿ ಪರಮೇಶ್ವರಪ್ಪ ಅವರು ಚಿಕ್ಕಮಗಳೂರು ಜಿಲ್ಲೆಯ ಲಕ್ಯಾ ಹೋಬಳಿಯ ಕಣಿವೆ ಹಳ್ಳಿಯವರು. ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿ ಜನರ ಸೇವೆಯಲ್ಲಿ ಸದಾ ಪಾತ್ರವಹಿಸಿದ್ದರು.
ಮೃತರು ಪತ್ನಿ ಲಕ್ಷ್ಮಿ ಹಾಗೂ ಪುತ್ರಿಯನ್ನು ಅಗಲಿದ್ದು ಇವರ ಸಾವಿನ ಕುರಿತಾಗಿ ಬಣಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಬೇಸರ ವ್ಯಕ್ತಪಡಿಸಿದ್ದಾರೆ. ಆಪ್ತ ವಲಯ ಹಾಗೂ ಸಾರ್ವಜನಿಕರು ಉತ್ತಮ ವ್ಯಕ್ತಿಯನ್ನು ಕಳೆದುಕೊಂಡ ನೋವನ್ನು ವ್ಯಕ್ತಪಡಿಸಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು




0 Comments