ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಎಸ್ ಈಶ್ವರಪ್ಪ ವಿರುದ್ಧ ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಹಾಗೂ ಸಿಪಿಐ ಪಕ್ಷಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ತಿಮಿಂಗಿಲ ಮೀನಿನ ವಾಂತಿ ಸಾಗಾಟ ನಡೆಸುತ್ತಿದ್ದ ಆರೋಪಿಗಳು ಪೊಲೀಸರ ಬಲೆಗೆ ; 50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ವಶಕ್ಕೆ

ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸಿಪಿಐ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. 

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಪ್ರತಿ ಕೆಲಸದಲ್ಲೂ ಕಮಿಷನ್ ಪಡೆಯುತ್ತಿದ್ದಾರೆ. ಸಚಿವ ಕೆ ಎಸ್ ಈಶ್ವರಪ್ಪ ಈ ಕೂಡಲೇ ರಾಜೀನಾಮೆ ನೀಡಬೇಕು ಪೊಲೀಸರು ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. 

ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿಗೆ ಈಶ್ವರಪ್ಪ ಕಾರಣ ಎಂದು ಆರೋಪ ಮಾಡಿರುವ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಶೀಘ್ರವಾಗಿ ಸಚಿವ ಈಶ್ವರಪ್ಪ ಅವರ ಮೇಲೆ ಕ್ರಮ ಕೈಗೊಳ್ಳುಬೇಕು ಹಾಗೂ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.