ಕೊಡಗು : (ನ್ಯೂಸ್ ಮಲ್ನಾಡ್ ವರದಿ) ತಡರಾತ್ರಿ ಮದ್ಯದಂಗಡಿಗೆ ನುಗ್ಗಿ ಮದ್ಯ, ಹಣ ಹಾಗೂ ಕ್ಯಾಮೆರಾದ ಹಾರ್ಡ್ ಡಿಸ್ಕ್ ನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ.
ಹರಿಹರಪುರ : ಮೈಮೇಲೆ ವಾಹನ ಹರಿದು ನರಳಾಡಿ ಸಾವನ್ನಪ್ಪಿದ ಹೆಬ್ಬಾವು
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿಯ ಮದ್ಯದ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದ್ದು ಖತರ್ನಾಕ್ ಕಳ್ಳರು ಮದ್ಯವನ್ನು ಕದ್ದೊಯ್ದು ತಮ್ಮ ಕೈಚಳಕ ತೋರಿದ್ದಾರೆ.
ಅಂಗಡಿಯ ಒಳ ನುಗ್ಗಿದ ಕಳ್ಳರು ಮದ್ಯ, ಹಣವನ್ನು ದೋಚಿದ್ದಾರೆ ಹಾಗೂ ಕ್ಯಾಮೆರಾದ ಹಾರ್ಡ್ ಡಿಸ್ಕ್ ನ್ನು ಕಳ್ಳತನ ಮಾಡುವ ಮೂಲಕ ಬಚಾವ್ ಆಗುವ ಯತ್ನ ನಡೆಸಿದ್ದು ಪೊಲೀಸರು ಈ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ಕುರಿತು ಪೊಲೀಸರು ಸ್ಥಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಕ್ಯಾಮೆರಾದ ಹಾರ್ಡ್ ಡಿಸ್ಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳನ್ನು ಸೆರೆ ಹಿಡಿಯುವ ಸಲುವಾಗಿ ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ಘಟನೆಯ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

.jpeg)
.jpeg)


0 Comments