
ಹಾಸನ : (ನ್ಯೂಸ್ ಮಲ್ನಾಡ್ ವರದಿ) ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಯುವಕ ದಯಾನಂದ ಈ ಅವಘಡದಲ್ಲಿ ಮೃತಪಟ್ಟ ವ್ಯಕ್ತಿ. ಹೊಳೆನರಸೀಪುರ ಪಟ್ಟಣದಲ್ಲಿ ಬೈಕ್ ನಲ್ಲಿ ಸಂಚಾರ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಬೈಕಿನಲ್ಲಿ ಮೃತ ದಯಾನಂದ ಅವರೊಂದಿಗೆ ಆತನ ಸ್ನೇಹಿತ ಕೂಡ ಇದ್ದ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಎನ್ ಆರ್ ಪುರ: ಭೀಕರ ರಸ್ತೆ ಅವಘಡದಲ್ಲಿ ಕೊಪ್ಪದ ಯುವಕ ಸಾವು, ಇನ್ನೋರ್ವನ ಸ್ಥಿತಿ ಗಂಭೀರ
ಈ ಬೈಕ್ ಅವಘಡದಲ್ಲಿ ದಯಾನಂದ ಅವರು ಮೃತಪಟ್ಟಿದ್ದರೆ ಆತನ ಗೆಳೆಯ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಕೂಡ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಸ್ಥಿತಿಯೂ ಕೂಡ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿಯ ಕುಟುಂಬಸ್ಥರು ಹಾಗೂ ಆತನನ್ನು ಕಳೆದುಕೊಂಡ ಸ್ನೇಹಿತರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಘಟನೆಯ ಕುರಿತಂತೆ ಹೊಳೆನರಸೀಪುರದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.



0 Comments