ಬಾಳೆಹೊನ್ನೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗೋವುಗಳನ್ನು ಕಡಿದು  ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಗೋಮಾಂಸವನ್ನು ವಶಕ್ಕೆ ಪಡೆದಿರುವ ಘಟನೆ ಕಳೆದ ರಾತ್ರಿ ನಡೆದಿದೆ. 

ಇದನ್ನೂ ಓದಿ : ಮೂರು ದಿನಗಳಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯ ಸ್ಥಿರೂರು ಗ್ರಾಮದ ಕಕ್ಕುಡುಗೆಯಲ್ಲಿ ಅಕ್ರಮವಾಗಿ ಗೋವುಗಳನ್ನು ಕೊಂದು ಮಾಂಸ ಮಾಡುತ್ತಿದ್ದ ಕಿಡಿಗೇಡಿಗಳ ಮೇಲೆ ದಾಳಿ ನಡೆಸಿದ ಬಾಳೆಹೊನ್ನೂರು ಪೊಲೀಸರು ಸರಿ ಸುಮಾರು ಒಂದು ಕ್ವಿಂಟಾಲ್ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.


ಪೊಲೀಸರು ದಾಳಿ ನಡೆಸುವ ಸಂದರ್ಭದಲ್ಲಿ ಎಸ್ಕೇಪ್ ಆಗುವ ಸಲುವಾಗಿ ಪೊಲೀಸರನ್ನೇ ತಳ್ಳಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಮಾಂಸವನ್ನು ಕಡಿಯುವ ಸಲುವಾಗಿ ಕತ್ತಿ ಮುಂತಾದ ಮಾರಕಾಸ್ತ್ರಗಳನ್ನು ಹೊಂದಿದ್ದ ಅವರು ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲಿಂದ ಅವರನ್ನು ತಳ್ಳಿ ಎಸ್ಕೇಪ್ ಆಗಿದ್ದಾರೆ. 

ಬಾಳೆಹೊನ್ನೂರು ವೃತ್ತ ನಿರೀಕ್ಷಕರ ಮಾರ್ಗದರ್ಶನದೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ ಬಾಳೆಹೊನ್ನೂರು ಪಿಎಸೈ ಹಾಗೂ  ಠಾಣೆಯ ಸಿಬ್ಬಂದಿಗಳು ಭಾಗವಹಿಸಿ ಅಕ್ರಮವಾಗಿ ಗೋವುಗಳನ್ನುಕೊಂದು ಮಾಡುತ್ತಿದ್ದ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಈ ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ರಾಜ್ಯದಲ್ಲಿ ಗೋಹತ್ಯೆಯ ವಿರುದ್ಧವಾಗಿ ಬಲವಾದ ಕಾನೂನುಗಳು ಜಾರಿಯಲ್ಲಿದ್ದರೂ ಕೂಡ ಈ ರೀತಿಯ ಘಟನೆಗಳು ಮಲೆನಾಡಿನಲ್ಲಿ ನಡೆಯುತ್ತಿರುವುದು ಅತ್ಯಂತ ಖಂಡನೀಯ ಈ ಕುರಿತು ಅಧಿಕಾರಿಗಳು ಹೆಚ್ಚಿನ ಗಮನವಹಿಸಿ ಆರೋಪಿಗಳ ವಿರುದ್ದ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಸರ್ಕಾರಿ ರಜೆ ನಿಮಿತ್ತ ಶೃಂಗೇರಿಗೆ ಆಗಮಿಸಿದ ಪ್ರವಾಸಿಗರ ದಂಡು : 

ಶೃಂಗೇರಿ : ಕಳೆದ ಎರಡು ದಿನಗಳಿಂದ ಪ್ರವಾಸಿಗರ ದಂಡೇ ಶೃಂಗೇರಿಗೆ ಹರಿದು ಬರುತ್ತಿದ್ದು ಅಲ್ಲಲ್ಲಿ ಕೆಲ ಸಮಸ್ಯೆಗಳು ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಎದುರಾಗಿದೆ. 

ಪವಿತ್ರ ಧಾರ್ಮಿಕ ಕ್ಷೇತ್ರವಾದ ಶೃಂಗೇರಿಗೆ ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು ಪ್ರವಾಸಿಗರಿಗೆ ವಾಹನ ನಿಲ್ಲಿಸಲು ಹಾಗೂ ತಂಗಲು ಲಾಡ್ಜ್ ಗಳ ಸಮಸ್ಯೆ ಎದುರಾಗಿದೆ. 



ಅಂಬೇಡ್ಕರ್ ಜಯಂತಿ, ಮಹಾವೀರ ಜಯಂತಿ, ಗುಡ್ ಫ್ರೈಡೇ ನಿಮಿತ್ತ ಸಾಲು ಸಾಲು ರಜೆಗಳು ಒಂದೆಡೆ ದೊರೆತಿದ್ದು ಇನ್ನೊಂದೆಡೆ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಆರಂಭವಾದ ಹಿನ್ನೆಲೆ ಅನೇಕ ಸಂಖ್ಯೆಯಲ್ಲಿ ಪ್ರವಾಸಿಗರು ತಮ್ಮ ವಾಹನಗಳ ಮೂಲಕ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿಗೆ ಆಗಮಿಸುತ್ತಿದ್ದಾರೆ. 

ವಾಹನ ಪಾರ್ಕಿಂಗ್ ಫುಲ್ ರಶ್ :

ಶೃಂಗೇರಿಯ ಗಾಂಧೀ ಮೈದಾನದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಪ್ರವಾಸಿಗರು ತಮ್ಮ ವಾಹನಗಳನ್ನು ದೇವಾಲಯದ ಮುಂಭಾಗದ ರಸ್ತೆಯಾದ ಭಾರತೀ ಬೀದಿಯಲ್ಲಿ ನಿಲುಗಡೆ ಮಾಡುತ್ತಿದ್ದರೆ ಈ ಕಾರಣದಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು ನಡೆದುಕೊಂಡು ಸಾಗುವ ಪಾದಚಾರಿಗಳಿಗೂ ಕೂಡ ಸಮಸ್ಯೆ ಉಂಟಾಗಿದೆ. 

ಪಟ್ಟಣದಲ್ಲಿರುವ ಆಂಜನೇಯನ ದೇವಾಲಯಗಳಲ್ಲಿ ರಾಮನವಮಿ, ಹನುಮ ಜಯಂತಿಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಪ್ರತಿದಿನ ರಾತ್ರಿ ವೇಳೆಯಲ್ಲಿ ಸಾಗುವ ಉತ್ಸವದ ಸಂದರ್ಭದಲ್ಲೂ ಕೂಡ ಟ್ರಾಫಿಕ್ ಜಾಮ್ ಉಂಟಾಗಿತ್ತು. 

ಇನ್ನು ಮಧ್ಯರಾತ್ರಿಯ ವರೆಗೂ ಕೂಡ ಪ್ರವಾಸಿಗರು ಶೃಂಗೇರಿಗೆ ಆಗಮಿಸುತ್ತಿದ್ದು ಎಲ್ಲೆಡೆ ತಂಗಲು ರೂಂಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಒಂದೆಡೆಯಿಂದ ಇನ್ನೊಂದೆಡೆಗೆ ಸಂಚರಿಸುತ್ತಾ ದಾರಿಯಲ್ಲಿ ಓಡಾಡುವ ಸ್ಥಳೀಯ ವ್ಯಕ್ತಿಗಳಲ್ಲಿ ರೂಂ ಕುರಿತಾಗಿ ವಿಚಾರ ಮಾಡುವುದು ಹೆಚ್ಚಾಗಿ ಕಂಡುಬಂತು. 

ಪ್ರವಾಸಿಗರು ಒನ್ ವೆ ಮುಖಾಂತರವೇ ದೇವಾಲಯವನ್ನು ಪ್ರವೇಶ ಮಾಡುತ್ತಿರುವ ಕಾರಣ ಪಟ್ಟಣದ ಭಾರತೀ ಬೀದಿ ಹಾಗೂ ಹಿಂಭಾಗದ ಬೈಪಾಸ್ ರಸ್ತೆಯಲ್ಲೂ ಕೂಡ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ರಸ್ತೆ ಅಗಲೀಕರಣ ಹಾಗೂ ಸಮರ್ಪಕವಾದ ಪಾರ್ಕಿಂಗ್ ವ್ಯವಸ್ಥೆಯ ಮೂಲಕವಷ್ಟೇ ಈ ಸಮಸ್ಯೆಗಳು ಬಗೆಹರಿಯಲಿದೆ.