ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಇನ್ನೇನು ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಪಕ್ಷ ಅಧಿಕಾರಕ್ಕೇರಬೇಕೆಂಬ ಹಿನ್ನೆಲೆ ಈಗಿನಿಂದಲೇ ತಯಾರಿ ಆರಂಭಿಸಿದೆ.  ಅಂತೆಯೇ ಶೃಂಗೇರಿಯ ಕೆಲ ಯುವಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಇದನ್ನೂ ಓದಿ : ಜೆಸಿಬಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಶೃಂಗೇರಿ ಮೂಲದ ಯುವಕ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡ ಹಾಗೂ ಶೃಂಗೇರಿ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಹತ್ತು ಜನ ಯುವಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಕಾಂಗ್ರೆಸ್ ಪಾರ್ಟಿ ಸೇರಲು ಆಗಮಿಸಿದ ಯುವಕರಿಗೆ ಶಾಸಕರು ಕಾಂಗ್ರೆಸ್ ಶಾಲನ್ನು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಸಂಘಟಿತರಾಗಿ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಯುವಕರು ಮುಂದಾಗಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದರು. 

ಈ ಪಕ್ಷ ಸೇರ್ಪಡೆ ಕಾರ್ಯಕ್ರಮದ ಸಂದರ್ಭದಲ್ಲಿ ಶಾಸಕ ಟಿ ಡಿ ರಾಜೇಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಹಾಜರಿದ್ದರು.