ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ವಿವಿಧೆಡೆಗಳಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ : 15 ವರ್ಷಗಳಿಂದ ಆಸ್ಪತ್ರೆ ಕಾಮಗಾರಿ ಪ್ರಗತಿಯಲ್ಲಿದೆ, ನಿಧಾನವಾಗಿ ಚಲಿಸಿ ! ಮುಖ್ಯಮಂತ್ರಿಗೆ ಶುಭಕೋರಿ ಬ್ಯಾನರ್ ಹಾಕಿದ ಶೃಂಗೇರಿ ಜನ
ಚಿಕ್ಕಮಗಳೂರು ನಗರ ಹಾಗೂ ತರೀಕೆರೆ ಪಟ್ಟಣದ ವಿವಿಧ ಕಡೆಗಳಲ್ಲಿ ಪ್ರತ್ಯೇಕ ದಾಳಿ ನಡೆಸಿದ ಪೊಲೀಸ್ ತಂಡಗಳು ಜೂಜಾಟದಲ್ಲಿ ತೊಡಗಿದ್ದ ಏಳು ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಟ್ಕಾ ಜೂಜಾಟದಲ್ಲಿ ಭಾಗಿಯಾಗಿದ್ದ ಈ ಆರೋಪಿಗಳಿಂದ 84,350 ರೂಪಾಯಿ ನಗದನ್ನು ಹಾಗೂ ಏಳು ಜನರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆರು ಪ್ರಕರಣಗಳನ್ನು ದಾಖಲು ಮಾಡಿದ್ದಾರೆ.
ಈ ಕುರಿತು ಎಚ್ಚರಿಕೆ ನೀಡಿರುವ ಅಧಿಕಾರಿಗಳು ಅಕ್ರಮವಾಗಿ ಸಾರ್ವಜನಿಕರು ಇಂತಹ ಹಣ ಕಳೆದುಕೊಳ್ಳುವ ಜೂಜಾಟದಲ್ಲಿ ಭಾಗಿಯಾಗಿ ಜೂಜಾಟ ನಡೆಸಿದಲ್ಲಿ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಹಾಗೂ ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
ಈ ದಾಳಿಯಲ್ಲಿ ಭಾಗಿಯಾಗಿ ಆರೋಪಿಗಳನ್ನು ಹಾಗೂ ಅವರ ಬಳಿಯಿದ್ದ ಹಣವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದ ಪೊಲೀಸ್ ತಂಡವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.
ಅರಣ್ಯ ಪ್ರದೇಶಕ್ಕೆ ಹಾಕಿದ್ದ ಬೇಲಿ ತೆರವಿಗೆ ತೆರಳಿದ್ದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ, ಪ್ರಕರಣ ದಾಖಲು :
ಶೃಂಗೇರಿ /ಕೊಪ್ಪ : ಅರಣ್ಯ ಇಲಾಖೆಯ ಅಧಿಕಾರಿಗಳು ಸರ್ಕಾರಿ ಜಾಗದಲ್ಲಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಲು ಹೋದಾಗ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಡ್ಡಗದ್ದೆ ಸಮೀಪದ ಅಸಗೋಡು ಗ್ರಾಮದ ಸರ್ಕಾರಿ ಸರ್ವೇ ನಂಬರ್ 125 ಹೊನಗೋಡು ಅರಣ್ಯ ಪ್ರದೇಶದಲ್ಲಿ ಹಾಕಿದ್ದ ಬೇಲಿಯ ಕುರಿತು ಶೃಂಗೇರಿ ಅರಣ್ಯ ಇಲಾಖೆಯ ಉಪ ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಹೆಚ್.ಎಂ ಹಾಗೂ ಅರಣ್ಯ ರಕ್ಷಕ ರಮೇಶ್ ಅವರು ಮಾಹಿತಿ ಕಲೆ ಹಾಕುತ್ತಿದ್ದ ಸಂದರ್ಭದಲ್ಲಿ ಅಲ್ಲೇ ಇದ್ದ ಕೆಲ ಸ್ಥಳೀಯರು ನಾವೇ ಬೇಲಿ ಹಾಕಿರುವುದು ಎಂದು ಮಾತು ಆರಂಭಿಸಿ ಈ ರೀತಿಯ ಕೆಲಸ ನಡೆಸುವುದು ತಪ್ಪು ಎಂದು ಮಾತನಾಡಿದಾಗ ಅರಣ್ಯ ರಕ್ಷಕ ರಮೇಶ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಹಾಗೂ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಲಾಗಿದೆ ಎಂದು ದೂರು ದಾಖಲಾಗಿದೆ.
ರಮೇಶ್ ಅವರ ಕಣ್ಣಿಗೆ ಹಲ್ಲೆ ನಡೆಸಲಾಗಿದೆ, ಅವರ ಕೆನ್ನೆಗೆ ಹೊಡೆಯಲಾಗಿದೆ ಹಾಗೂ ಬೈಕನ್ನು ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿ ಪಡಿಸಲಾಗಿದೆ ಎಂದು ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಅಸಗೋಡು ತೌಫೀಕ್, ಶರತ್, ಪುನೀತ್,ಹಸನಬ್ಬ ಮುಂತಾದವರ ಮೇಲೆ ದೂರು ದಾಖಲಾಗಿದ್ದು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

.jpeg)
.jpeg)
.jpeg)
.jpeg)
.jpeg)

.jpeg)
.jpeg)
.jpeg)

0 Comments