ಬಾಳೆಹೊನ್ನೂರು : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ಅತೀ ವೇಗದ ವಾಹನ ಚಾಲನೆಯಿಂದ ನಿಯಂತ್ರಣ ತಪ್ಪಿ ಕಾರೊಂದು ಮಗುಚಿಬಿದ್ದ ಘಟನೆ ನಡೆದಿದೆ.

ಇದನ್ನೂ ಓದಿ : ಕೊಪ್ಪ : ಮಧ್ಯರಾತ್ರಿ ಮನೆಯಿಂದ ನಾಪತ್ತೆಯಾದ 23 ವರ್ಷ ಪ್ರಾಯದ ವಿವಾಹಿತೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಿಂದ ನರಸಿಂಹರಾಜಪುರದ ಕಡೆಗೆ ಸಂಚಾರ ಮಾಡುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದಲ್ಲಿದ್ದ ತೋಟಕ್ಕೆ ನುಗ್ಗಿ ಮಗುಚಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. 

ಕಾರು ಮುಳುವಳ್ಳಿ ಸಮೀಪದಲ್ಲಿ ನಿಯಂತ್ರಣ ತಪ್ಪಿ ಉರುಳಿದ್ದು ಕಾರಿನಲ್ಲಿದ್ದ ಪುಟ್ಟ ಮಗು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಓರ್ವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಾಲಕನು ವೇಗವಾಗಿ ಬೇರೆ ವಾಹನವೊಂದನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಆತನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆಯೇ ಬೇರೆ ವಾಹನದ ಪ್ರಯಾಣಿಕರು ಹಾಗೂ ಸ್ಥಳೀಯರು ಧಾವಿಸಿ ವಾಹನದಲ್ಲಿದ್ದವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದ್ದಾರೆ.