ಕಳಸ : (ನ್ಯೂಸ್ ಮಲ್ನಾಡ್ ವರದಿ) ಪ್ರವಾಸಕ್ಕೆಂದು ಕಳಸಕ್ಕೆ ಬಂದಿದ್ದ ಚಿತ್ರದುರ್ಗ ಮೂಲದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಚಾಲಕನಿಗೆ ಗಂಭೀರ ಗಾಯ
ಚಿಕ್ಕಮಗಳೂರು ಜಿಲ್ಲೆಯ ಕಳಸ ಹಾಗೂ ಹೊರನಾಡು ದೇವಾಲಯಗಳ ದರ್ಶನಕ್ಕೆ ಬಂದಿದ್ದ ಚಿತ್ರದುರ್ಗ ಮೂಲದ ಯುವಕ ಹೆಬ್ಬಾಳೆಯಲ್ಲಿನ ಭದ್ರಾ ನದಿಗೆ ಸ್ನಾನಕ್ಕೆಂದು ತೆರಳಿದ್ದ, ಈ ವೇಳೆ ಆಯತಪ್ಪಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಚಿತ್ರದುರ್ಗ ಮೂಲದ ಅಶೋಕ್ ಎಂದು ಗುರುತಿಸಲಾಗಿದೆ.
ಅಶೋಕ್ (19) ತನ್ನ ಕುಟುಂಬ ವರ್ಗದವರೊಡನೆ ದೇವಾಲಯಗಳ ದರ್ಶನಕ್ಕೆಂದು ಆಗಮಿಸಿದ್ದ ಎನ್ನಲಾಗಿದೆ. ನದಿಯಲ್ಲಿ ಆಯತಪ್ಪಿದ ಪರಿಣಾಮ ಈ ದುರ್ಘಟನೆ ನಡೆದಿದ್ದು ಯುವಕನು ನದಿಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಕುಟುಂಬದ ಸದಸ್ಯನನ್ನು ಕಳೆದುಕೊಂಡಿರುವ ಪೋಷಕರು ಅತೀವ ದುಃಖವನ್ನು ಹೊರಹಾಕಿದ್ದು, ಶವವನ್ನು ಕಳಸದ ಹೆಬ್ಬಾಳೆ ನದಿಯಿಂದ ಮೇಲಕ್ಕೆತ್ತಲಾಗಿದೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಚಾಲಕನಿಗೆ ಗಂಭೀರ ಗಾಯ.
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆ ಏರಿ ಕಾಮಗಾರಿ ಪ್ರಕ್ರಿಯೆ ನಡೆಯುತ್ತಿದ್ದು ಈ ಜಾಗದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ವಾಹನ ಸವಾರರನ್ನು ಮೇಲಕ್ಕೆತ್ತಿ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಸ್ ನ ಮುಂಭಾಗ ಹಾಗೂ ಬೈಕ್ ಜಖಂಗೊಂಡಿದೆ.
ವಾಹನ ಸವಾರನ ಹಣೆ ಹಾಗೂ ತಲೆಯ ಭಾಗಕ್ಕೆ ತೀವ್ರತರವಾದ ಗಾಯಗಳಾಗಿದ್ದು ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.





0 Comments