ಶಿವಮೊಗ್ಗ : ( ನ್ಯೂಸ್ ಮಲ್ನಾಡ್ ವರದಿ) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಇದನ್ನೂ ಓದಿ : ಮೂಡಿಗೆರೆ: ವರದಕ್ಷಿಣೆ ಕಿರುಕುಳಕ್ಕೆ ನವ ವಿವಾಹಿತೆ ಬಲಿ ! ವಿಷ ಹಾಕಿ ಪತ್ನಿಯನ್ನು ಕೊಂದ ಪಾಪಿ ಪತಿ
ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದಲ್ಲಿ ಯುವಕನ ತಲೆ ಮೇಲೆ ಕಲ್ಲೆತ್ತಿಹಾಕಿ ಬರ್ಬರವಾಗಿ ಹತ್ಯೆಮಾಡಲಾಗಿದೆ. ಹತ್ಯೆಗೀಡಾದ ಯುವಕನನ್ನು ಕುಶನ್ ಚಂದು ಎಂದು ಗುರುತಿಸಲಾಗಿದ್ದು ಹಳೆಯ ದ್ವೇಷದ ಹಿನ್ನೆಲೆ ಈ ಕೃತ್ಯವನ್ನು ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕುಶನ್ ಚಂದು ಸ್ನೇಹಿತನಾದ ಸತೀಶ್ ಜೊತೆಗೆ ಹೋಟೆಲ್ ಗೆ ಊಟಕ್ಕೆಂದು ತೆರಳಿದ್ದು ಈ ಸಂದರ್ಭದಲ್ಲಿ ಪರಶುರಾಮ ಹಾಗೂ ಕುಶನ್ ನಡುವೆ ಹಳೆಯ ವಿಚಾರಕ್ಕೆ ಜಗಳವಾಗಿದೆ. ಈ ಸಂದರ್ಭದಲ್ಲಿ ಜಗಳ ತಾರಕಕ್ಕೇರಿದ್ದು ಪರಶುರಾಮ ಕಲ್ಲನ್ನು ಎತ್ತಿ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಹಳೆಯ ವೈಷಮ್ಯದ ಹಿನ್ನೆಲೆ ಈ ಕೃತ್ಯ ನಡೆದಿರಬಹುದು ಎಂಬ ಮಾತುಗಳು ಸ್ಥಳೀಯ ವಲಯದಲ್ಲಿ ಕೇಳಿ ಬಂದಿದ್ದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.






0 Comments