ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ರಸ್ತೆಯ ಬದಿಯಲ್ಲಿ ಚಲಾವಣೆಗೊಂಡು ಉರುಳಿದ ಘಟನೆ ನಡೆದಿದೆ. 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಗೋಣಿಬೀಡು ಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್  ರಸ್ತೆಯಿಂದ ಬದಿಗೆಸರಿದ ಪರಿಣಾಮ ಬಸ್ ಜಖಂಗೊಂಡಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರಿಗೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಬಸ್ಸಿನಲ್ಲಿದ್ದವರು ಸುರಕ್ಷಿತವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. 

ಮಲೆನಾಡು ಭಾಗದ ರಸ್ತೆಗಳು ಅತ್ಯಂತ ಕಿರಿದಾಗಿದ್ದು ಈ ರಸ್ತೆಗಳಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಅತೀ ಹೆಚ್ಚಿನ ಜಾಗರೂಕತೆಯನ್ನು ವಹಿಸಿ ಸಂಚರಿಸಬೇಕಿದೆ.  ಬಸ್ ರಸ್ತೆಯಿಂದ ಸಂಪೂರ್ಣ ಪಕ್ಕಕ್ಕೆ ಸರಿದ ಪರಿಣಾಮ ಬಸ್ಸಿನ ಭಾಗಗಳು ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದು ತಕ್ಷಣವೇ ಬೇರೆ ವಾಹನಗಳಲ್ಲಿ ಪ್ರಯಾಣ ನಡೆಸುತ್ತಿದ್ದ ಸಹ ಪ್ರಯಾಣಿಕರು ಬಸ್ಸಿನಲ್ಲಿದ್ದವರ ರಕ್ಷಣೆಗೆ ಧಾವಿಸಿದ್ದಾರೆ. 

ತನು ಕೊಟ್ಟಿಗೆಹಾರ, ವರದಿಗಾರರು