ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಇಂಟರ್ನೆಟ್ ಕೇಬಲ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಣಿಯು ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮನೆ ವೆಂಕಟರಾವ್ ಎಂಬುವವರ ಪುತ್ರ ಪ್ರಸನ್ನ ಕುಮಾರ್ ಎಂಬುವವರು ಗುಡ್ಡೆತೋಟ ಮೇಲಿನಪೇಟೆ ಸಮೀಪದಲ್ಲಿ ಇಂಟರ್ನೆಟ್ ಕೇಬಲ್ ಸರಿಪಡಿಸುವಾಗ ಆಕಸ್ಮಿಕವಾಗಿ ಏಣಿಯು ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಶಾಕ್ ಗೆ ಒಳಪಟ್ಟು ಅಲ್ಲೇ ಕೆಳಗೆ ಬಿದಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಕರೆದುಕೊಂಡು ಹೋಗಲಾಯಿತಾದರೂ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ರಿಜಿಸ್ಟರ್ ಆಗಬಹುದು : https://forms.gle/PvypXpJerzDzsrfE9
ಕೊಪ್ಪ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವ್ಯಕ್ತಿಯು ಶಾಕ್ನಿಂದ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಮೃತ ವ್ಯಕ್ತಿಯು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬ ಅತೀವ ದುಃಖವನ್ನು ಹೊರಹಾಕಿದೆ.
ಘಟನೆಗೆ ಸಂಬಂಧಿಸಿದಂತೆ ಜಯಪುರ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಘಟನೆಯ ಕುರಿತು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ. ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಗುಡುಗು ಹಾಗೂ ಮಿಂಚಿನ ಸಮೇತ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲ ವಿದ್ಯುತ್ ಅವಘಡಗಳು ಸಂಭವಿಸುತ್ತಿದೆ. ಕಾರ್ಮಿಕರು, ಕೃಷಿಕರು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಕಾರ್ಯಗಳಲ್ಲಿ ತೊಡಗಬೇಕೆಂದು ತಿಳಿಸಲಾಗಿದೆ.





0 Comments