ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ನಗರದ ಮನೆಗಳಿಗೆ ನುಗ್ಗಿ ಕಳ್ಳತನ ಎಸಗುತ್ತಿದ್ದ ಆರೋಪಿಯನ್ನು ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ : ಶೃಂಗೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ನಿಶ್ಮಿತ ಬಸ್ ಪಲ್ಟಿ 20 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಕಳ್ಳನನ್ನು ಸೆರೆಹಿಡಿಯುವ ಸಲುವಾಗಿ ಕಾರ್ಯಾಚರಣೆಗಿಳಿದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಗ್ರಾಮದ ಚಂದ್ರ ಬಳೆಗಾರ ಎಂಬ 28 ವರ್ಷ ಪ್ರಾಯದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆದ ಕಳ್ಳತನ ಗಳಲ್ಲಿ ಭಾಗಿಯಾಗಿ ಕಳ್ಳತನವನ್ನು ಎಸಗಿದ್ದ ಎನ್ನಲಾಗಿದೆ. ಮೂರು ಮನೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಈತ ಒಪ್ಪಿಕೊಂಡಿದ್ದು ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಬಂಧಿತ ಆರೋಪಿಯಿಂದ ಅಂದಾಜು ಎರಡು ಕೆಜಿ ಬೆಳ್ಳಿ ಆಭರಣ 20 ಸಾವಿರ ಮೌಲ್ಯದ ಬಂಗಾರದ ಆಭರಣ ಸೇರಿದಂತೆ ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಈತನ ಕೃತ್ಯಗಳ ಕುರಿತಾದ ಮಾಹಿತಿ ಸಂಪೂರ್ಣವಾಗಿ ಇನ್ನಷ್ಟೇ ಲಭಿಸಬೇಕಿದೆ.
ಈ ಕಾರ್ಯಾಚರಣೆಯು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಕಾರಿ ಲಕ್ಷ್ಮಿ ಪ್ರಸಾದ್, ಎಎಸ್‌ಪಿ ವಿಕ್ರಮ ಅಮತೆ ಮಾರ್ಗದರ್ಶನದಲ್ಲಿ ಎಎಸ್‌ಪಿ ರೋಹನ್ ಜಗದೀಶ್ ಸೂಚನೆ ಮೇರೆಗೆ ನಡೆದಿದ್ದು, ವಿಶೇಷ ತಂಡದಲ್ಲಿ ನಗರ ಪೊಲೀಸ್ ಠಾಣಾ ಪ್ರಭಾರ ಸಿಪಿಐ ಕೆ.ವಿ.ಕೃಷ್ಣಪ್ಪ, ಕಾರ್ಗಲ್ ಪೊಲೀಸ್ ಇನ್‌ಸ್ಪೆಕ್ಟರ್ ಜಿ.ತಿರುಮಲೇಶ್, ಪಿಎಸ್‌ಐ ಟಿ.ಡಿ. ಸಾಗರಕರ್, ಪೊಲೀಸ್ ಅಪರಾಧ ವಿಭಾಗದ ಸಿಬ್ಬಂದಿ ರತ್ನಾಕರ, ಸಂತೋಷ ನಾಯ್ಕ್, ಅಶೋಕ, ಹಝರತ್ ಅಲಿ, ಶ್ರೀಧರ್ ಇದ್ದರು.




0 Comments