ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ನಾಳೆ ಶೃಂಗೇರಿ ಹಾಗೂ ಕೊಪ್ಪ ತಾಲೂಕಿನ ಹರಿಹರಪುರ ಶಾರದಾ ಪೀಠಕ್ಕೆ ಭೇಟಿನೀಡಲಿದ್ದಾರೆ. 

ಇದನ್ನೂ ಓದಿ : ಹರಿಹರಪುರ : ಮೈಮೇಲೆ ವಾಹನ ಹರಿದು ನರಳಾಡಿ ಸಾವನ್ನಪ್ಪಿದ ಹೆಬ್ಬಾವು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿರುವ ದಕ್ಷಿಣಾಮ್ನಾಯ ಶ್ರೀ ಶಾರದಾಪೀಠ ಶೃಂಗೇರಿಗೆ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ನಾಳೆ ದಿನಾಂಕ 19.04.2022 ರ ಮಂಗಳವಾರ ಆಗಮಿಸಲಿದ್ದಾರೆ. ಹೆಲಿಕಾಪ್ಟರ್ ಮುಖಾಂತರ ಆಗಮಿಸುವ ಅವರು ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶ್ರೀ ಶಾರದಾಂಬಾ ದೇಗುಲಕ್ಕೆ ಭೇಟಿ ನೀಡಿ ದೇವಿ ಶಾರದೆಯ ಆಶೀರ್ವಾದವನ್ನು ಪಡೆಯಲಿದ್ದಾರೆ. 





ಶೃಂಗೇರಿಯ ನಂತರ ಕೊಪ್ಪ ತಾಲೂಕಿನ ಹರಿಹರಪುರ ಮಠಕ್ಕೆ ಭೇಟಿ ನೀಡಿ ಶ್ರೀ ಮಠದಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಹರಿಹರಪುರ ಮಠದಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಈಗಾಗಲೇ ಭಾಗಿಯಾಗಿದ್ದು ಕೇಂದ್ರದ ನಾಯಕರುಗಳೂ ಕೂಡ ಭಾಗಿಯಾಗುವ ಸಾಧ್ಯತೆಗಳಿವೆ. ಈ ಅದ್ಧೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುತ್ತಿರುವ ಕಾರಣ ಈಗಾಗಲೇ ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಭರದಿಂದ ನಡೆಯುತ್ತಿದೆ. 





ಹರಿಹರಪುರ ಮಠದಲ್ಲಿ ನಿರ್ವಿಘ್ನವಾಗಿ ನಡೆದ ಲಕ್ಷ ಮೋದಕ ಗಣಪತಿ ಮಹಾಯಾಗ  : 

ಹರಿಹರಪುರ : ಅದ್ಧೂರಿ ಹಾಗೂ ಅತ್ಯಂತ ಸಡಗರದಿಂದ ಹರಿಹರಪುರ ಶ್ರೀ ಮಠದಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾ ಕುಂಭಾಭಿಷೇಕ ಮಹೋತ್ಸವದ ಅಂಗವಾಗಿ ಇಂದು ಲಕ್ಷ ಮೋದಕ ಗಣಪತಿ ಮಹಾಯಾಗ ನಡೆಯಿತು. 

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಮಠದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿರುವ ವೈಭವದ ಧಾರ್ಮಿಕ ಕಾರ್ಯಕ್ರಮವಾದ ಮಹಾಕುಂಭಾಭಿಷೇಕದ ಅಂಗವಾಗಿ ಇಂದು ಲಕ್ಷ ಮೋದಕ ಗಣಪತಿ ಮಹಾಯಾಗ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅನೇಕ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ನಾಳೆ 18.04.2022 ರಂದು ಸಹಸ್ರ ಚಂಡಿಕಾ ಮಹಾಯಾಗದ ಸಂಕಲ್ಪ, ಕೋಟಿ ಕುಂಕುಮಾರ್ಚನೆಯ ಮಹಾಸಂಕಲ್ಪ, ಮಹಾ ಮೃತ್ಯುಂಜಯಯಾಗ, ಸಹಸ್ರ ಚಂಡಿಕಾ ಮಹಾಯಾಗದ ಪಾರಾಯಣ ಪ್ರಾರಂಭವಾಗಲಿದೆ. ಸಹಸ್ರ ಚಂಡಿಕಾ ಮಹಾಯಾಗದ  ಪೂರ್ಣಾಹುತಿಯ ದಿನವಾದ ಶುಕ್ರವಾರದಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆಗಮಿಸುವ ನಿರೀಕ್ಷೆಯಿದೆ. ಪ್ರತೀದಿನ ಮದ್ಯಾಹ್ನ 11 ಗಂಟೆಗೆ ಧಾರ್ಮಿಕ ಸಭೆ ನಡೆಯುತಲಿದೆ. 




ಇಂದು ವಿದುಷಿ ಡಾ. ಪಂತುಲು ರಮಾ ಮತ್ತು ವೃಂದದ ವತಿಯಿಂದ ಹಾಡುಗಾರಿಕೆ ನಡೆಯಿತು. ಪ್ರತಿದಿನವೂ ಕೂಡ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣವಾಗಿ ನಡೆಯುತಲಿದ್ದು ಈ ಕಾರ್ಯಕ್ರಮವನ್ನು ಸವಿಯಲು ಬಂದವರು ಕಾರ್ಯಕ್ರಮದ ವೀಕ್ಷಣೆಮಾಡಿ ತೃಪ್ತ ಮನೋಭಾವನೆಯಿಂದ ತೆರಳುತ್ತಿದ್ದಾರೆ. 

ದೇಶದ, ರಾಜ್ಯದ ವಿವಿಧ ಕಡೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತರಿಗೆ ತಿಂಡಿ ಹಾಗೂ ಊಟದ ವ್ಯವಸ್ಥೆಯನ್ನು ಹಾಗೂ ತಂಗಲು ರೂಮಿನ ವ್ಯವಸ್ಥೆಯನ್ನು ಶ್ರೀ ಮಠದ ವತಿಯಿಂದ ಉಚಿತವಾಗಿ ನೀಡಲಾಗುತ್ತಿದೆ. ಒಟ್ಟಾರೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ವೈಭವದಿಂದಸಾಗಿದ್ದು ಇನ್ನೂ ಒಂದು ವಾರಗಳ ಕಾಲ ಅದ್ಧೂರಿಯಾಗಿ ಈ ಎಲ್ಲಾ ಕಾರ್ಯಕ್ರಮಗಳು ನಡೆಯಲಿದೆ.