ಕಾರ್ಕಳ/ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ ) ಜೆಸಿಬಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶೃಂಗೇರಿ ಮೂಲದ ಯುವಕನೋರ್ವ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ : ಚಿಕ್ಕಮಗಳೂರು : ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನ ಬರ್ಬರ ಹತ್ಯೆ
ಕಾರ್ಕಳದ ಸಾಣೂರು ಬೀಜೋತ್ಪಾದನಾ ಕೇಂದ್ರದ ಬಳಿ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಅವಿನಾಶ್ ವಿ (29) ಸಾವನ್ನಪ್ಪಿದ್ದಾರೆ.ನಿನ್ನೆ ತಡರಾತ್ರಿ 12 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಜೆಸಿಬಿ ಮೂಡಬಿದ್ರೆಯಿಂದ ಕಾರ್ಕಳದ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಚಾಲನೆ ನಡೆಸುತ್ತಿದ್ದ ಅವಿನಾಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಅವಿನಾಶ್ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಲ್ಕಟ್ಟೆ ಗ್ರಾಮದ ನಿವಾಸಿ ವಾಸು ಪೂಜಾರಿ ಅವರ ಪುತ್ರನಾಗಿದ್ದು ಕಾರ್ಕಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅಪಘಾತದಲ್ಲಿ ಮೃತಪಟ್ಟಿರುವ ಅವಿನಾಶ್ ಅವರನ್ನು ನೆನೆದು ಕುಟುಂಬಸ್ಥರು ಹಾಗೂ ಗೆಳೆಯರು ಅತೀವವಾದ ನೋವನ್ನು ವ್ಯಕ್ತಪಡಿಸಿದ್ದಾರೆ.
ಘಟನೆಯ ಕುರಿತಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ.





0 Comments