ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ ) ಶೃಂಗೇರಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೃಹತ್ ಆರೋಗ್ಯ ಮೇಳದ ಆಯೋಜನೆಯನ್ನು ಜಿಲ್ಲಾಡಳಿತದ ಆಶ್ರಯದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಆಯೋಜನೆ ನಡೆಸಲಾಗಿದೆ. 

ಇದನ್ನೂ ಓದಿ : ಶೃಂಗೇರಿ : ಹಿಂದೂ ಸೇವಾ ಪ್ರತಿಷ್ಠಾನದ ವತಿಯಿಂದ ಉಚಿತ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರದ ಉದ್ಘಾಟನೆ

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಚಿಕ್ಕಮಗಳೂರು, ತಾಲೂಕು ಆಡಳಿತ ಶೃಂಗೇರಿ ಇವರ ಆಶ್ರಯದಲ್ಲಿ  ಸ್ವಾತಂತ್ರ್ಯ ದೊರಕಿದ 75 ನೆ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳವನ್ನು ಏಪ್ರಿಲ್ 23 ರ ಶನಿವಾರದಂದು ಆಯೋಜನೆ ನಡೆಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಈ ಆರೋಗ್ಯಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅಧಿಕಾರಿಗಳು ಕೋರಿದ್ದಾರೆ.



ಈ ಬೃಹತ್ ಆರೋಗ್ಯ ಶಿಬಿರದಲ್ಲಿ ತಜ್ಞ ವೈದ್ಯರುಗಳು ಲಭ್ಯವಿದ್ದು ಹೃದಯ ತಜ್ಞರು, ಮಕ್ಕಳ ತಜ್ಞರು, ಶಸ್ತ್ರ ಚಿಕಿತ್ಸೆ, ಸ್ತ್ರೀ ರೋಗ ತಜ್ಞರು, ಮೂಳೆ ಎಲುಬು ತಜ್ಞರು, ಕಿವಿ, ಮೂಗು,ಗಂಟಲು ತಜ್ಞರು ಸೇರಿದಂತೆ ಎಲ್ಲಾ ಖಾಯಿಲೆಗಳಿಗೆ ಸೂಕ್ತ ರೀತಿಯ ಉಚಿತ ವೈದ್ಯಕೀಯ ಪರೀಕ್ಷೆ ಹಾಗೂ ಸಂಬಂಧಿಸಿದ ಸೌಲಭ್ಯಗಳು ಲಭ್ಯವಿದ್ದು ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಡ್ಡಾಯವಾಗಿ ಆಧಾರ್ ಕಾರ್ಡ್ ಹಾಗೂ ರೇಶನ್ ಕಾರ್ಡ್ ನ್ನು ಹೊಂದಿರಬೇಕೆಂಬ ಸೂಚನೆಯನ್ನು ನೀಡಲಾಗಿದ್ದು ಅರ್ಹರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.



ಕೊಪ್ಪ : ಏಷ್ಯಾ ಖಂಡದ ಮೊದಲ ಸಹಕಾರಿ ಸಂಸ್ಥೆಯಾದ ಸಹಕಾರ ಸಾರಿಗೆ ಸಂಸ್ಥೆಯ ಬಸ್ ಗಳು ಆರ್ಥಿಕ ಮುಗ್ಗಟ್ಟಿನ ಕಾರಣ ಕೊಟ್ಟು ಕಳೆದ ಎರಡು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದು  ಈ ಸಂಸ್ಥೆಯನ್ನು ಪುನರಾರಂಭಗೊಳಿಸಬೇಕೆಂದು ಜಿಲ್ಲಾ ಟ್ರಾನ್ಸ್ಪೋರ್ಟ್ ಅಂಡ್ ಮಜ್ದೂರ್ ಸಂಘದ ಪದಾಧಿಕಾರಿಗಳು ಹಾಗೂ ಸಹಕಾರ ಸಾರಿಗೆ ಸಂಸ್ಥೆಯ ಕಾರ್ಮಿಕರು ಶೃಂಗೇರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಹರಿಹರಪುರ ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹರಿಹರಪುರ ಹೆಲಿಪ್ಯಾಡ್ ನಲ್ಲಿ ಭೇಟಿಯಾದ ಸಹಕಾರ ಸಾರಿಗೆ ಸಂಸ್ಥೆಯ ಕಾರ್ಮಿಕರು ಹಾಗೂ ಜಿಲ್ಲಾ ಟ್ರಾನ್ಸ್ಪೋರ್ಟ್ ಅಂಡ್ ಮಜ್ದೂರ್ ಸಂಘದ ಪದಾಧಿಕಾರಿಗಳು ಮಲೆನಾಡಿನ ಜನರಿಗೆ ಅನೇಕ ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸಿದ ಸಾರಿಗೆ ಸಂಸ್ಥೆಯನ್ನು ಪುನರಾರಂಭಿಸಿ ಈ ಸಂಸ್ಥೆಯನ್ನು ನಂಬಿಕೊಂಡಿರುವ ಇನ್ನೂರಕ್ಕೂ ಅಧಿಕ ಕಾರ್ಮಿಕರ ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕೆಂದು ಮುಖ್ಯಮಂತ್ರಿಗಳನ್ನು ಕೋರಿದರು.


ಸಹಕಾರ ಸಾರಿಗೆ ಸಂಸ್ಥೆಯ ಕಛೇರಿಗೆ ಬೀಗ ಹಾಕಿ ಮುಟ್ಟುಗೋಲು ಹಾಕಲಾಗಿದೆ ಬೀಗವನ್ನು ತೆರೆದು ಕಛೇರಿಯನ್ನು ಮುಕ್ತ ಮಾಡಬೇಕು, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ರಾಜೀನಾಮೆ ನೀಡಿದ್ದಾರೆ ಹೊಸ ಆಡಳಿತ ಮಂಡಳಿಯನ್ನು ರಚನೆ ಮಾಡಿ  ಅನುಕೂಲ ಮಾಡಿಕೊಡಬೇಕೆಂದು ಕೋರಿದ್ದಾರೆ. 

ಹತ್ತು ಕೋಟಿ ರೂಪಾಯಿಗಿಂತಲೂ ಅಧಿಕ ಹಣದ ದುರುಪಯೋಗವಾಗಿದೆ ಈ ಕುರಿತು ತನಿಖಾ ತಂಡವನ್ನು ರಚನೆ ಮಾಡಿ ಶೀಘ್ರವಾಗಿ ತನಿಖೆ ನಡೆಸಬೇಕೆಂದು  ಕಾರ್ಮಿಕರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.