ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಪರಿಸರವಾದಿ, ಹೋರಾಟಗಾರ ಕಲ್ಕುಳಿ ವಿಠ್ಠಲ್ ಹೆಗ್ಡೆ ಸೇರಿದಂತೆ ನಾಲ್ವರಿಗೆ ಗೌರವ ಡಿ.ಲಿಟ್ ಪ್ರಶಸ್ತಿ ಪುರಸ್ಕೃತಗೊಂಡಿದೆ. 

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಖ್ಯಾತ ಪರಿಸರವಾದಿ ಹಾಗೂ ಹೋರಾಟಗಾರ ಕಲ್ಕುಳಿ ವಿಠ್ಠಲ್ ಹೆಗ್ಡೆ ಸೇರಿದಂತೆ ನಾಲ್ವರಿಗೆ ಗೌರವ ಡಿ.ಲಿಟ್ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಗೌರವಿಸಿದರು. ಚಿತ್ರದುರ್ಗ ಶಿವಮೂರ್ತಿ ಮುರುಘಾ ಶರಣರು, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಕೆಂಪೇಗೌಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಬಿ.ಎಸ್.ಪುಟ್ಟಸ್ವಾಮಿ ಅವರಿಗೆ ಪದವಿ ಪ್ರಧಾನ ಮಾಡಿದರು. 

ಇದನ್ನೂ ಓದಿ : ಹರಿಹರಪುರ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠದಲ್ಲಿ ವೈಭವದ ಮಹಾಕುಂಭಾಭಿಷೇಕ




ಕಲ್ಕುಳ್ಳಿ ವಿಠ್ಠಲ್ ಹೆಗ್ಡೆ ಅವರು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಹೋರಾಟ ಸೇರಿದಂತೆ  ಮಲೆನಾಡಿನ ಅನೇಕ ಹೋರಾಟಗಳನ್ನು ಕೈಗೆತ್ತಿಕೊಂಡು ಪ್ರತಿಭಟಿಸಿದವರು. ಅವರ ಮಳೆನಾಡು ಅಧ್ಯಯನ ಕುರಿತು ಮಂಡಿಸಿದ ಪ್ರಬಂಧಕ್ಕೆ ಈ ಪ್ರಶಸ್ತಿ ಲಭಿಸಿದೆ. 

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆದ 30 ನೇ ನುಡಿ ಹಬ್ಬದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಈ ನಾಲ್ವರಿಗೆ ಗೌರವ ಡಿ.ಲಿಟ್ ಪದವಿ ನೀಡಿ ಗೌರವಿಸಿದರು. 




ಬೆಲೆ ಏರಿಕೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡರ ಬೃಹತ್ ಪ್ರತಿಭಟನೆ : ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿ

ಚಿಕ್ಕಮಗಳೂರು : ಕೇಂದ್ರ ಬಿಜೆಪಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಬೆಲೆ ಏರಿಕೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಉಂಟುಮಾಡಿ ಸಾಮಾನ್ಯ ವರ್ಗದ ಜನರು ಬದುಕಲು ಬಿಡದಂತೆ ಮಾಡುತ್ತಿದೆ ಎಂದು ಆರೋಪಿಸಿ ಹಾಗೂ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಇಂದು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.




ಈ ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಸಿದ್ಧರಾಮಯ್ಯ ಸೇರಿದಂತೆ ಅನೇಕ ಮುಖಂಡರುಗಳು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಬಡವರ ಮೇಲೆ ಬಿಜೆಪಿ ದೌರ್ಜನ್ಯ ಎಸಗುತ್ತಿದೆ, ಪ್ರತಿದಿನವೂ ಕೂಡ ಅಗತ್ಯ ವಸ್ತುಗಳಾದ ಬೆಳೆಕಾಳುಗಳು, ಅಡುಗೆ ಎಣ್ಣೆ, ಪೆಟ್ರೋಲ್ ಡೀಸೆಲ್ ಗ್ಯಾಸ್ ಸೇರಿದಂತೆ ಬಹುತೇಕ ವಸ್ತುಗಳ ಮೇಲೆ  ಬೆಲೆಏರಿಕೆ ನಡೆಸುತ್ತಿದೆ ಇದರಿಂದಾಗಿ ಬಡವರು ಅತ್ಯಂತ ಕ್ಲಿಷ್ಟಕರ ಸನ್ನಿವೇಶದಿಂದ ಜೀವನ ನಡೆಸುವಂತಾಗಿದೆ ಎಂದರು. 

ಸರ್ಕಾರದ ಕುರಿತು ಮಾತನಾಡಿದ ಅವರು ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಪ್ರತಿಯೊಂದು ಕೆಲಸಕ್ಕೂ 40% ಕಮಿಷನ್ ನೀಡುವ ಸ್ಥಿತಿ ಎದುರಾಗಿದೆ ಮುಂದಿನ ದಿನಗಳಲ್ಲಿ ಚುನಾವಣೆ ಬರಲಿದೆ ಈ ಸಂದರ್ಭದಲ್ಲಿ ಜನರು ಬಿಜೆಪಿಗೆ ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. 

ನಡೆದ ಈ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಗ್ಯಾಸ್ ಸಿಲೆಂಡರ್ ಗೆ ಹೂವಿನ ಹಾರ ಹಾಕಿ ನಾಲ್ವರು ಹೊತ್ತೊಯ್ಯುತ್ತಿದ್ದ ದೃಶ್ಯವೂ ಕಂಡುಬಂತು, ಈ ಮೂಲಕ ಬಿಜೆಪಿ ಸರ್ಕಾರವನ್ನು ತೀವ್ರವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ವಿರೋಧಿಸಿದರು ಹಾಗೂ ಬೆಲೆ ಏರಿಕೆಯ ವಿರುದ್ಧ ಆಕ್ರೋಶ ಹೊರಹಾಕಿದರು. ಬಿಜೆಪಿ ಸರ್ಕಾರವು ಸಂಪೂರ್ಣವಾಗಿ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ತಿದ್ದಿಕೊಳ್ಳದೇ ಮುಂದುವರೆದಲ್ಲಿ ತಕ್ಕಶಾಸ್ತಿ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು. 

ಈ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಕಾಂಗ್ರೆಸ್ ನ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಶಾಸಕರಾದ ಟಿ.ಡಿ ರಾಜೇಗೌಡ, ಮಾಜಿ ಸಂಸದ ದೃವನಾರಾಯಣ, ಸಚಿನ್ ಮೀಗ, ಮಾಜಿ ಶಾಸಕ ಶ್ರೀನಿವಾಸ್, ಹಾಗೂ ಕಾಂಗ್ರೆಸ್ ನ ಮುಖಂಡರುಗಳು ಮತ್ತು ಕಾರ್ಯಕರ್ತರು ಅತಿಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.