ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂವರು ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಇದನ್ನೂ ಓದಿ : ಅತಿಯಾದ ಪರಿಸರ ಮಾಲಿನ್ಯ, ತುಂಗಾ ನದಿ ನೀರು ಕುಡಿಯಲು ಯೋಗ್ಯವಲ್ಲ !
ಅನೇಕ ಸಮಾಜಮುಖಿ ಕೆಲಸಗಳೊಂದಿಗೆ ಉತ್ತಮ ಸೇವೆ ಸಲ್ಲಿಸಿ ಮಾದರಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಅವರನ್ನು ಕೊಪ್ಪದಿಂದ ಭಾಲ್ಕಿ ಪೊಲೀಸ್ ಠಾಣೆಗೆ ಸರ್ಕಾರ ವರ್ಗಾವಣೆ ಮಾಡಿದೆ. ಅಂತೆಯೇ ಕಡೂರಿನ ಇನ್ಸ್ಪೆಕ್ಟರ್ ಮಂಜುನಾಥ್ ಬಿ.ಎಸ್ ಅವರನ್ನು ಕಡೂರಿನಿಂದ ಬೆಂಗಳೂರಿಗೆ ಹಾಗೂ ಕಡೂರಿನ ಇನ್ನೋರ್ವ ಇನ್ಸ್ಪೆಕ್ಟರ್ ರೇವಣ್ಣ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದೆ.
ಜಯಪುರ : ಅಕ್ರಮ ಗೋಮಾಂಸ ಪತ್ತೆ ಪ್ರಕರಣ ; ಆರೋಪಿ ಸುಕುರ್ ಅಲಿ, ಸಮೀರ್ ಶೇಖ್ ಬಂಧನ
ಜಯಪುರ : ಈ ಹಿಂದೆ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಡಿಗೆ ಗ್ರಾಮದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದರು ಈ ಸಂದರ್ಭದಲ್ಲಿ ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದರು ಪ್ರಸ್ತುತ ಆರೋಪಿಗಳನ್ನು ಬಂಧಿಸುವಲ್ಲಿ ಬಾಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಡಿಗೆ ಗ್ರಾಮದಲ್ಲಿ ಅಕ್ರಮವಾಗಿ ಗೋವುಗಳನ್ನು ಕೊಂದು ಮಾಂಸ ಮಾಡುತ್ತಿದ್ದ ಅಸ್ಸಾಂ ಮೂಲದ ಕಿಡಿಗೇಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಸರಿ ಸುಮಾರು ಒಂದು ಕ್ವಿಂಟಾಲ್ ಗೋಮಾಂಸವನ್ನು ವಶಕ್ಕೆ ಪಡೆದಿದ್ದರು. ಈ ಸಂದರ್ಭದಲ್ಲಿ ಸ್ಥಳದಿಂದ ಎಸ್ಕೇಪ್ ಆಗಿದ್ದ ಆರೋಪಿಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಾಳೆಹೊನ್ನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಅಸ್ಸಾಂ ಮೂಲದ ಸುಕುರ್ ಅಲಿ ಹಾಗೂ ಸಮೀರ್ ಶೇಕ್ ಎಂದು ಗುರುತಿಸಲಾಗಿದೆ. ಈ ಆರೋಪಿಗಳು ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲಿಂದ ಅವರನ್ನು ತಳ್ಳಿ ಎಸ್ಕೇಪ್ ಆಗಿದ್ದರು.
ಈ ಪ್ರಕರಣದಲ್ಲಿ ಭಾಗಿಯಾಗಿದ್ದವರಲ್ಲಿ ಇಬ್ಬರು ಸೆರೆಯಾಗಿದ್ದಾರೆ. ಇನ್ನುಳಿದ ಮೂವರನ್ನು ಆದಷ್ಟು ಶೀಘ್ರವಾಗಿ ಪೊಲೀಸರು ಬಂಧಿಸುವುದಾಗಿ ತಿಳಿಸಿದ್ದು ಲೈನ್ ನೀಡಿದ ತೋಟದ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.




0 Comments