ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಪ್ರಕರಣದಲ್ಲಿ ಆರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 

ಇದನ್ನೂ ಓದಿ : ದೇವಿರಮ್ಮನ ಸುಗ್ಗಿ ಹಬ್ಬದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ; ಸಿ.ಟಿ ರವಿ ಹುಟ್ಟೂರಿನಲ್ಲೂ ಆರಂಭವಾದ ಅಭಿಯಾನ

ಶಿವಮೊಗ್ಗದ ಜಂಬಣ್ಣ ರೈಸ್ ಮಿಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಈ ದಾಳಿಯನ್ನು ನಡೆಸಿದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಬನ್ನಿಕೆರೆ ಗ್ರಾಮದ ಉಮೇಶ್ ನಾಯ್ಕ, ಬಾಪೂಜಿ ನಗರದ ರಾಹಿಲ್ ಖಾನ್, ಹನುಮಂತನಗರದ ನಿವಾಸಿಗಳಾದ ನಿತಿನ್ ಕುಮಾರ್, ಶ್ರೇಯಸ್, ನವುಲೆಯ ನಿತಿನ್ ಬಂಧಿತರು. ಬಂಧಿತರಿಂದ 1ಕೆ.ಜಿ 100 ಗ್ರಾಂ ಒಣ ಗಾಂಜಾ ನಗದು ಹಾಗೂ 1 ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಭದ್ರಾವತಿಯ ಹಳೆನಗರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ 23 ವರ್ಷದ ಅರ್ಷಾನ್ ಎಂಬ ಯುವಕನನ್ನು ಪೊಲೀಸರು ಬಂಧಿಸಿ 420 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚಿನದಾಗಿ ದುಶ್ಚಟಗಳಿಗೆ ದಾಸರಾಗಿ ಬಲಿಯಾಗುತ್ತಿದ್ದು ಈ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆಹಾಕಿ ಗಾಂಜಾ ಸಾಗಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಸೂಕ್ತ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.