ಬಾಳೆಹೊನ್ನೂರು : (ನ್ಯೂಸ್ ಮಲ್ನಾಡ್ ವರದಿ) ಅನುಮಾನಾಸ್ಪದವಾಗಿ ವ್ಯಕ್ತಿಯೋರ್ವ ಲಾಡ್ಜ್ ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. 

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಪಟ್ಟಣದ ಲಾಡ್ಜ್ ವೊಂದರಲ್ಲಿ ನೇಣು ಬಿಗಿದುಕೊಂಡು 47 ವರ್ಷ ಪ್ರಾಯದ ಬಸವರಾಜ್ ಲಿಂಗಪ್ಪ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂಲತಃ ಬೆಳಗಾವಿಯವರಾದ ಮೃತ ಬಸವರಾಜ್ ಬೆಳಗಾವಿಯಲ್ಲಿ ಗುತ್ತಿಗೆದಾರನ ಬಳಿ ಕಾಮಗಾರಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. 

ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ರಿಜಿಸ್ಟರ್ ಆಗಬಹುದು 

:https://forms.gle/PvypXpJerzDzsrfE9 

ಘಟನಾ ಸ್ಥಳಕ್ಕೆ ಆಗಮಿಸಿದ ಬಾಳೆಹೊನ್ನೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಬಳಿಯಲ್ಲಿ ಡೆತ್ ನೋಟ್ ಲಭ್ಯವಾಗಿದ್ದು ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. 

ಮೃತ ಬಸವರಾಜ್ ಲಿಂಗಪ್ಪ ಅವರು ಕಳೆದ ಆರು ವರ್ಷಗಳಿಂದ ಗುತ್ತಿಗೆದಾರನ ಬಳಿಯಲ್ಲಿ ಸೂಪರ್ ವೈಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ದೊರೆತಿದ್ದು ಆತ್ಮಹತ್ಯೆಗೆ ನಿಖರ ಕಾರಣಗಳೇನಿರಬಹುದು ಎಂದು ಪೊಲೀಸರ ಸ್ಪಷ್ಟ ತನಿಖೆಯಿಂದ ಲಭ್ಯವಾಗಬೇಕಿದೆ. ಮೃತ ಬಸವರಾಜ್ ಲಿಂಗಪ್ಪ ಅವರ ಕುಟುಂಬವರ್ಗವದರು ನೀಡುವ ದೂರಿನ ಆಧಾರದ ಮೇರೆಗೆ ತನಿಖೆ ನಡೆಯಲಿದೆ.