ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ತೆಂಗಿನಕಾಯಿ ಗೋದಾಮಿಗೆ ಬೆಂಕಿ ಬಿದ್ದ ಕಾರಣ ಅಪಾರ ಮೌಲ್ಯದ ತೆಂಗಿನಕಾಯಿಗಳು ಸುಟ್ಟು ಕರಕಲಾದ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದ ನರಸಿಂಹಪ್ಪ ಎಂಬುವವರಿಗೆ ಸೇರಿದ ತೆಂಗಿನಕಾಯಿ ಗೋದಾಮಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅಪಾರ ಮೌಲ್ಯದ ತೆಂಗಿನಕಾಯಿ ಹಾಗೂ ಒಣಕೊಬ್ಬರಿ ಈ ಅಗ್ನಿ ಅವಘಡದಿಂದಾಗಿ ನಾಶವಾಗಿದೆ.

ಯಾರೋ ಕಿಡಿಗೇಡಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಅಪಾರ ಮೌಲ್ಯದ ತೆಂಗಿನಕಾಯಿ ನಾಶವಾಗಿದೆ, ಈ ಘಟನೆಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಈ ನಷ್ಟವನ್ನು ಭರಿಸುವುದು ಅತ್ಯಂತ ಕಷ್ಟಕರವಾಗಿದೆ ಎಂದು ಮಾಲೀಕರಾದ ನರಸಿಂಹಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. 

ತನು ಕೊಟ್ಟಿಗೆಹಾರ, ವರದಿಗಾರರು