ಜಯಪುರ : (ನ್ಯೂಸ್ ಮಲ್ನಾಡ್ ವರದಿ) ಈ ಹಿಂದೆ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಡಿಗೆ ಗ್ರಾಮದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದರು ಈ ಸಂದರ್ಭದಲ್ಲಿ ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದರು ಪ್ರಸ್ತುತ ಆರೋಪಿಗಳನ್ನು ಬಂಧಿಸುವಲ್ಲಿ ಬಾಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. 

ಇದನ್ನೂ ಓದಿ : ಅತಿಯಾದ ಪರಿಸರ ಮಾಲಿನ್ಯ, ತುಂಗಾ ನದಿ ನೀರು ಕುಡಿಯಲು ಯೋಗ್ಯವಲ್ಲ !

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಡಿಗೆ ಗ್ರಾಮದಲ್ಲಿ ಅಕ್ರಮವಾಗಿ ಗೋವುಗಳನ್ನು ಕೊಂದು ಮಾಂಸ ಮಾಡುತ್ತಿದ್ದ ಅಸ್ಸಾಂ ಮೂಲದ ಕಿಡಿಗೇಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಸರಿ ಸುಮಾರು ಒಂದು ಕ್ವಿಂಟಾಲ್ ಗೋಮಾಂಸವನ್ನು ವಶಕ್ಕೆ ಪಡೆದಿದ್ದರು. ಈ ಸಂದರ್ಭದಲ್ಲಿ ಸ್ಥಳದಿಂದ ಎಸ್ಕೇಪ್ ಆಗಿದ್ದ ಆರೋಪಿಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಾಳೆಹೊನ್ನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬಂಧಿತರನ್ನು ಅಸ್ಸಾಂ ಮೂಲದ ಸುಕುರ್ ಅಲಿ ಹಾಗೂ ಸಮೀರ್ ಶೇಕ್ ಎಂದು ಗುರುತಿಸಲಾಗಿದೆ. ಈ ಆರೋಪಿಗಳು ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲಿಂದ ಅವರನ್ನು ತಳ್ಳಿ ಎಸ್ಕೇಪ್ ಆಗಿದ್ದರು. 

ಈ ಪ್ರಕರಣದಲ್ಲಿ ಭಾಗಿಯಾಗಿದ್ದವರಲ್ಲಿ ಇಬ್ಬರು ಸೆರೆಯಾಗಿದ್ದಾರೆ. ಇನ್ನುಳಿದ ಮೂವರನ್ನು ಆದಷ್ಟು ಶೀಘ್ರವಾಗಿ ಪೊಲೀಸರು ಬಂಧಿಸುವುದಾಗಿ ತಿಳಿಸಿದ್ದು ಲೈನ್ ನೀಡಿದ ತೋಟದ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.