ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಹಣದ ವಿಚಾರವಾಗಿ ಇಬ್ಬರ ನಡುವೆ ಕಲಹಉಂಟಾಗಿ ಕತ್ತಿಯಿಂದ ಕಡಿದು ಯುವಕನನ್ನು ಬರ್ಬರವಾಗಿ ಹತ್ಯೆಮಾಡಿರುವ ಘಟನೆ ನರಸಿಂಹರಾಜಪುರದಲ್ಲಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಲೇಔಟ್ ನಿರ್ಮಾಣ ಸಂಬಂಧ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮೆಣಸೂರು ಬಾಬು ಎಂಬ ವ್ಯಕ್ತಿಯ ಮನೆಯ ಸಮೀಪದಲ್ಲಿ ಶಿರೀಶ್ ಹಾಗೂ ಬಾಬುವಿನ ನಡುವೆ ಹಣದ ಕುರಿತಾಗಿ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ. ಜಗಳ ತಾರಕಕ್ಕೇರಿದ್ದು ಬಾಬು ಕತ್ತಿಯಿಂದ ಶಿರೀಶ್ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಗಂಭೀರವಾಗಿ ಗಾಯಗೊಂಡ ಕಾರಣ ಆತನಿಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಯುಸಿರೆಳೆದಿದ್ದಾನೆ. 

ವೃತ್ತಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಡೆಸುತ್ತಿದ್ದ ಯುವಕ ಶಿರೀಶ್ ಅವಿವಾಹಿತನಾಗಿದ್ದು ಕುಟುಂಬಕ್ಕೆ ಆಸರೆಯಾಗಿದ್ದ. ಹಣದ ಸಲುವಾಗಿ ಏರ್ಪಟ್ಟ ಕಲಹ ಓರ್ವನ ಸಾವಿನಲ್ಲಿ ಅಂತ್ಯಕಂಡಿದೆ. 

ಈ ಸಂಬಂಧ ಪೊಲೀಸರು ಆರೋಪಿ ಬಾಬುವನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಗಳು ಸಂಪೂರ್ಣವಾಗಿ ಇನ್ನಷ್ಟೇ ಲಭ್ಯವಾಗಬೇಕಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಚಿಕ್ಕಮಗಳೂರಿನಲ್ಲಿ ಬೆಟ್ಟಿಂಗ್ ಹಣದ ಸಲುವಾಗಿ ಯುವಕನೋರ್ವನನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು ಈ ಸಂಬಂಧವೂ ಕೂಡ ತನಿಖೆ ಪ್ರಗತಿಯಲ್ಲಿದೆ.