ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ದೇಶದ ಕೆಲ ರಾಜ್ಯಗಳಲ್ಲಿ ಕೊರೋನ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರವೂ ಕೂಡ ಕೆಲ ನಿಯಮಗಳನ್ನು ಹಾಗೂ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಿ ಆದೇಶಿಸಿದೆ ಅಂತೆಯೇ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸೋಂಕನ್ನು ನಿಯಂತ್ರಣ ಮಾಡುವ ಸಲುವಾಗಿ ಮಾನ್ಯ ಜಿಲ್ಲಾಧಿಕಾರಿಗಳು ಮಾರ್ಗಸೂಚಿ ಹೊರಡಿಸಿದ್ದಾರೆ.
ಇದನ್ನೂ ಓದಿ : ಬಾಳೆಹೊನ್ನೂರು : ಅರಣ್ಯ ಪ್ರದೇಶದಲ್ಲಿ ಪ್ರತ್ಯಕ್ಷವಾದ ಎರಡು ಹುಲಿಗಳ ಸಂಚಾರ
ಈಗಾಗಲೇ ದೆಹಲಿ, ಹರಿಯಾಣ,ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಈ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸುರಕ್ಷತಾ ಕ್ರಮಗಳನ್ನು ಹಾಗೂ ಮುಂಜಾಗತ್ರಾ ಕ್ರಮಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ರಿಜಿಸ್ಟರ್ ಆಗಬಹುದು : https://forms.gle/PvypXpJerzDzsrfE9
ಕೋವಿಡ್ - 19 ಸೋಂಕನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ನಿಯಂತ್ರಣ ಮಾಡುವ ಸಲುವಾಗಿ ಚಿಕ್ಕಮಗಳೂರಿನ ಮಾನ್ಯ ಜಿಲ್ಲಾಧಿಕಾರಿಗಳಾದ ಕೆ.ಎನ್ ರಮೇಶ್ ಅವರು ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರ ಮಾಡುವ ಬಸ್ಸುಗಳಲ್ಲಿ, ಹಾಗೂ ಕಾರ್ಯ ನಿರ್ವಹಿಸುವ ಕಛೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳುವುದನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಕನಿಷ್ಠ ಎರಡು ಅಡಿಗಳ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಆದೇಶಿಸಿದ್ದಾರೆ.
ಈ ನಿಯಮಾವಳಿಗಳನ್ನು ಯಾರಾದರೂ ಉಲ್ಲಂಘನೆ ಮಾಡಿದ್ದಲ್ಲಿ ಅವರ ಮೇಲೆ ಅನ್ವಯವಾಗುವಂತಹ ದಂಡ ವಿಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ ಹಾಗೂ ಜಿಲ್ಲೆಯ ಜನರು ಕೋವಿಡ್ ವೈರಸ್ ನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹೊರಡಿಸುವ ನಿಯಮಗಳನ್ನು ಪಾಲಿಸಿ ಸಹಕಾರ ನೀಡಬೇಕೆಂದು ತಿಳಿಸಿದ್ದಾರೆ.





0 Comments