ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಏಷ್ಯಾ ಖಂಡದ ಮೊದಲ ಸಹಕಾರಿ ಸಂಸ್ಥೆಯಾದ ಸಹಕಾರ ಸಾರಿಗೆ ಸಂಸ್ಥೆಯ ಬಸ್ ಗಳು ಆರ್ಥಿಕ ಮುಗ್ಗಟ್ಟಿನ ಕಾರಣ ಕೊಟ್ಟು ಕಳೆದ ಎರಡು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದು ಈ ಸಂಸ್ಥೆಯನ್ನು ಪುನರಾರಂಭಗೊಳಿಸಬೇಕೆಂದು ಜಿಲ್ಲಾ ಟ್ರಾನ್ಸ್ಪೋರ್ಟ್ ಅಂಡ್ ಮಜ್ದೂರ್ ಸಂಘದ ಪದಾಧಿಕಾರಿಗಳು ಹಾಗೂ ಸಹಕಾರ ಸಾರಿಗೆ ಸಂಸ್ಥೆಯ ಕಾರ್ಮಿಕರು ಹರಿಹರಪುರ ಮಠಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು.
ಇದನ್ನೂ ಓದಿ : 15 ವರ್ಷಗಳಿಂದ ಆಸ್ಪತ್ರೆ ಕಾಮಗಾರಿ ಪ್ರಗತಿಯಲ್ಲಿದೆ, ನಿಧಾನವಾಗಿ ಚಲಿಸಿ ! ಮುಖ್ಯಮಂತ್ರಿಗೆ ಶುಭಕೋರಿ ಬ್ಯಾನರ್ ಹಾಕಿದ ಶೃಂಗೇರಿ ಜನ
ಚಿಕ್ಕಮಗಳೂರು ಜಿಲ್ಲೆಯ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಹರಿಹರಪುರ ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹರಿಹರಪುರ ಹೆಲಿಪ್ಯಾಡ್ ನಲ್ಲಿ ಭೇಟಿಯಾದ ಸಹಕಾರ ಸಾರಿಗೆ ಸಂಸ್ಥೆಯ ಕಾರ್ಮಿಕರು ಹಾಗೂ ಜಿಲ್ಲಾ ಟ್ರಾನ್ಸ್ಪೋರ್ಟ್ ಅಂಡ್ ಮಜ್ದೂರ್ ಸಂಘದ ಪದಾಧಿಕಾರಿಗಳು ಮಲೆನಾಡಿನ ಜನರಿಗೆ ಅನೇಕ ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸಿದ ಸಾರಿಗೆ ಸಂಸ್ಥೆಯನ್ನು ಪುನರಾರಂಭಿಸಿ ಈ ಸಂಸ್ಥೆಯನ್ನು ನಂಬಿಕೊಂಡಿರುವ ಇನ್ನೂರಕ್ಕೂ ಅಧಿಕ ಕಾರ್ಮಿಕರ ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕೆಂದು ಮುಖ್ಯಮಂತ್ರಿಗಳನ್ನು ಕೋರಿದರು.
ಸಹಕಾರ ಸಾರಿಗೆ ಸಂಸ್ಥೆಯ ಕಛೇರಿಗೆ ಬೀಗ ಹಾಕಿ ಮುಟ್ಟುಗೋಲು ಹಾಕಲಾಗಿದೆ ಬೀಗವನ್ನು ತೆರೆದು ಕಛೇರಿಯನ್ನು ಮುಕ್ತ ಮಾಡಬೇಕು, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ರಾಜೀನಾಮೆ ನೀಡಿದ್ದಾರೆ ಹೊಸ ಆಡಳಿತ ಮಂಡಳಿಯನ್ನು ರಚನೆ ಮಾಡಿ ಅನುಕೂಲ ಮಾಡಿಕೊಡಬೇಕೆಂದು ಕೋರಿದ್ದಾರೆ.
ಹತ್ತು ಕೋಟಿ ರೂಪಾಯಿಗಿಂತಲೂ ಅಧಿಕ ಹಣದ ದುರುಪಯೋಗವಾಗಿದೆ ಈ ಕುರಿತು ತನಿಖಾ ತಂಡವನ್ನು ರಚನೆ ಮಾಡಿ ಶೀಘ್ರವಾಗಿ ತನಿಖೆ ನಡೆಸಬೇಕೆಂದು ಕಾರ್ಮಿಕರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಗಲಭೆಕೋರರ ವಿರುದ್ಧ ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಕ್ರಮ ಕೈಗೊಳ್ಳಿ : ಬಜರಂಗದಳ ಆಗ್ರಹ
ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಕಾನೂನಿನ ಅಡಿಯಲ್ಲಿ ಕಠಿಣವಾಗಿ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ನಡೆದ ಗಲಭೆಯು ಪೂರ್ವ ನಿಯೋಜಿತವಾಗಿದ್ದು ಇದೊಂದು ಷಡ್ಯಂತ್ರವಾಗಿದೆ. ಈ ಗಲಭೆಗೆ ಪೂರ್ವತಯಾರಿ ನಡೆಸಿ ಪೊಲೀಸ್ ಸಿಬ್ಬಂದಿಗಳ ಮೇಲೆ, ಆಸ್ಪತ್ರೆಯ ಮೇಲೆ ಹಾಗೂ ಹನುಮಾನ್ ದೇವಾಲಯದ ಮೇಲೆ ಕಲ್ಲು ತೂರಾಟ ನಡೆಸಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದು ಈ ಕಾರ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಬಜರಂಗದಳದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಕುರಿತು ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರವನ್ನು ಆಗ್ರಹಿಸಿರುವ ಅವರು ಉತ್ತರ ಪ್ರದೇಶದ ಸರ್ಕಾರದ ನಿರ್ಣಯದಂತೆ ಅವರಿಗೆ ಸಂಬಂಧಿಸಿದ ಕಟ್ಟಡಗಳನ್ನು ಮುಟ್ಟುಗೋಲು ಹಾಕಿ, ಮುಂದಿನ ದಿನಗಳಲ್ಲಿ ಈ ರೀತಿಯ ಯಾವುದೇ ಘಟನೆಗಳು ಮರುಕಳಿಸದ ರೀತಿಯಲ್ಲಿ ನಿರ್ಣಯಗಳನ್ನು ಕೈಗೊಳ್ಳುಬೇಕಿದೆ ಎಂದು ಮನವಿಯ ಮುಖೇನ ಸರ್ಕಾರವನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಯೋಗೇಶ್ ರಾಜ ಅರಸು, ವಿಶ್ವಹಿಂದೂ ಪರಿಷತ್ ಜಿಲ್ಲಾ ಸಹಕಾರ್ಯದರ್ಶಿ ರಂಗನಾಥ್, ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷರಾದ ಆಟೋ ಶಿವಣ್ಣ, ವಿಶ್ವ ಹಿಂದೂ ಪರಿಷತ್ ನಗರ ಉಪಾಧ್ಯಕ್ಷ ದೇವು, ಬಜರಂಗದಳ ಜಿಲ್ಲಾ ವಿದ್ಯಾರ್ಥಿ ಪ್ರಮುಖ್ ಗುರುಕಿರಣ್, ಬಜರಂಗದಳ ನಗರ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)



0 Comments