ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಸರಕಾರಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ್ದು ಕೆಲವರು ಸಣ್ಣಪುಟ್ಟ ಗಾಯಗಳಿಗೊಳಗಾದ ಘಟನೆ ನಡೆದಿದೆ. 

ಇದನ್ನೂ ಓದಿ : ಗ್ರಾಮ ಪಂಚಾಯತ್ ಅಧ್ಯಕ್ಷನ ಶೋಕಿ! ಸ್ವಂತ ಕಾರಿಗೆ ಕರ್ನಾಟಕ ಸರ್ಕಾರದ ಲಾಂಛನ ಹೊಂದಿದ ಬೋರ್ಡ್

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ್ದು ಪಿಕಪ್ ವಾಹನದ ಚಾಲಕ ಸಣ್ಣ ಪುಟ್ಟ ಗಾಯಗಳಿಗೆ ಒಳಗಾಗಿದ್ದಾನೆ. 

ಈ ರಸ್ತೆಯಲ್ಲಿ ಹೆಚ್ಚಿನ ತಿರುವು ಮುರುವುಗಳಿರುವ ಕಾರಣ ಹಾಗೂ ವಾಹನಗಳ ರಭಸಕ್ಕೆ ಈ ಅವಘಡ ಸಂಭವಿಸಿದೆ. ಮಲೆನಾಡು ಭಾಗದಲ್ಲಿ ರಸ್ತೆ ಸಂಚಾರ ಮಾಡುವ ಸವಾರರು ಹೆಚ್ಚಿನ ಜಾಗ್ರತೆಯನ್ನುವಹಿಸಿ ವಾಹನ ಚಾಲನೆ ನಡೆಸಬೇಕು. 

ಈ ಘಟನೆಯು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಎರಡೂ ವಾಹನಗಳಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ತನು ಕೊಟ್ಟಿಗೆಹಾರ, ವರದಿಗಾರರು