ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಹೊಸಳ್ಳಿ ರಸ್ತೆಗಳ ಅಭಿವೃದ್ದಿಗೆ ಒತ್ತಾಯಿಸಿ ಸುತ್ತಮುತ್ತಲಿನ ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದ ಬಿ ಹೊಸಳ್ಳಿ ಗ್ರಾ.ಪಂ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಆಗ್ರಹಿಸಿ ಬಿ ಹೊಸಳ್ಳಿ ಗ್ರಾಮಸ್ಥರು ಬಿ.ಹೊಸಳ್ಳಿ, ಭಾರತಿಬೈಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಿ.ಹೊಸಳ್ಳಿ ಗ್ರಾ.ಪಂ ಸದಸ್ಯ ಆಶ್ರಿತ್ ಮಾತನಾಡಿ ಚಕಮಕ್ಕಿಯಿಂದ ಭಾರತಿಬೈಲು ಸಂಪರ್ಕಿಸುವ ರಸ್ತೆ ಸೇರಿದಂತೆ ವಿವಿಧ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಸುಮಾರು ಎರಡು ದಶಕಗಳಿಂದ ರಸ್ತೆ ಅಭಿವೃದ್ದಿಯಾಗಿಲ್ಲ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಕೂಡಲೇ ರಸ್ತೆ ಅಭಿವೃದ್ದಿ ಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವೆ ಮೋಟಮ್ಮ ಈ ಸಂದರ್ಭದಲ್ಲಿ ಮಾತನಾಡಿ ಅತಿವೃಷ್ಟಿ ಸಂದರ್ಭದಲ್ಲಿ ನೆರೆ ಹಾನಿ ಕಾಮಗಾರಿಗೆ ಬಂದ ಕೋಟ್ಯಾಂತರ ರೂ ಅನುದಾನ ಯಾವ ಗ್ರಾಮಗಳಿಗೆ ಬಳಕೆಯಾಗಿದೆ ಎಂಬುದನ್ನು ಸಂಬಂಧಪಟ್ಟವರು ಸ್ಪಷ್ಟಪಡಿಸಬೇಕು. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಸರಿಪಡಿಸಲು ಮುಂದಾಗಬೇಕು ಎಂದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಹಾಗೂ ಜೆಡಿಎಸ್ ಪಕ್ಷದ ನಾಯಕ ಸಚಿವ ಬಿ.ಬಿ ನಿಂಗಯ್ಯ, ಚುನಾಯಿತ ಸರ್ಕಾರ ಬಿ.ಹೊಸಳ್ಳಿ ಗ್ರಾಮದ ರಸ್ತೆ ಅಭಿವೃದ್ದಿಗೆ ಮುಂದಾಗಬೇಕು. ಕಾಫಿ ಬೆಳೆಗಾರರು, ವಿದ್ಯಾರ್ಥಿಗಳು, ಕಾರ್ಮಿಕರು ಹೆಚ್ಚಿರುವ ಈ ಗ್ರಾಮದ ರಸ್ತೆ ಅಭಿವೃದ್ದಿ ಮಾಡಬೇಕಿದೆ ಎಂದರು.
ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಸ್ಥಳದಲ್ಲಿಯೇ ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕರೆ ಮಾಡಿ ಮಾತನಾಡಿ ಮಾತುಕತೆ ನಡೆಸಿ ಶೀಘ್ರವಾಗಿ ರಸ್ತೆ ಅಭಿವೃದ್ದಿ ಮಾಡುವಂತೆ ತಿಳಿಸಿದರು. ನಂತರ ಮಾತನಾಡಿದ ಅವರು, ರಸ್ತೆ ಅಭಿವೃದ್ದಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಮಾತನಾಡಿದ್ದು ರಸ್ತೆ ಅಭಿವೃದ್ದಿಗೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ತೀವ್ರವತರವಾದ ಪ್ರತಿಭಟನೆ ಹಾಗೂ ನಿರಂತರ ಹೋರಾಟ ನಡೆಸಲಾಗುವುದು ಜನರಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ, ಯೋಗೇಶ್, ಬಸವರಾಜ್, ಪ್ರವೀಣ್, ಸುರೇಶ್, ಶಿವಕುಮಾರ್, ಸಂತೋಷ್, ಗ್ರಾಮಸ್ಥರಾದ ಅರ್ಜುನ್, ಅಣ್ಣಪ್ಪ, ಗಣೇಶ್,ವರುಣ್, ಆದರ್ಶ್,ಪ್ರಸನ್ನ, ರಮೇಶ್, ದಿನೇಶ್ ಮುಂತಾದವರು ಇದ್ದರು.
ತನು ಕೊಟ್ಟಿಗೆಹಾರ, ವರದಿಗಾರರು.

.jpeg)
.jpeg)

0 Comments