ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. 

ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆ ಏರಿ ಕಾಮಗಾರಿ ಪ್ರಕ್ರಿಯೆ ನಡೆಯುತ್ತಿದ್ದು ಈ ಜಾಗದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ವಾಹನ ಸವಾರರನ್ನು ಮೇಲಕ್ಕೆತ್ತಿ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಸ್ ನ ಮುಂಭಾಗ ಹಾಗೂ ಬೈಕ್ ಜಖಂಗೊಂಡಿದೆ. 

ವಾಹನ ಸವಾರನ ಹಣೆ ಹಾಗೂ ತಲೆಯ ಭಾಗಕ್ಕೆ ತೀವ್ರತರವಾದ ಗಾಯಗಳಾಗಿದ್ದು ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಒಳಗಾದವರು ಯಾರೆಂಬ ಮಾಹಿತಿ ಇಲ್ಲದ ಕಾರಣ ಸಂಬಂಧಿಕರನ್ನು ಸಂಪರ್ಕಿಸುವುದು ಕಷ್ಟವಾಗಿದ್ದು ಇವರ ಪರಿಚಯ ಇದ್ದಲ್ಲಿ ಕೂಡಲೇ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಬರುವಂತೆ ಕೋರಲಾಗಿದೆ