ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.





ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಧಾರಾಕಾರ ಮಳೆಯ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು,ಶಿವಮೊಗ್ಗ, ಬೆಂಗಳೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಏಪ್ರಿಲ್ 17 ರಿಂದ 19 ರ ವರೆಗೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಎಚ್ಚರಿಸಿದೆ. 

ಈ ಭಾಗಗಳಲ್ಲಿ ವಾಸಿಸುವ ಜನರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ತಮ್ಮ ದೈನಂದಿನ ಕಾರ್ಯದಲ್ಲಿ ತೊಡಗುವಂತೆ ಸೂಚನೆ ನೀಡಲಾಗಿದೆ.


ಮಲೆನಾಡಿನ ಪರಿಸರವಾದಿ, ಹೋರಾಟಗಾರ ಕಲ್ಕುಳಿ ವಿಠ್ಠಲ್ ಹೆಗ್ಡೆ ಅವರಿಗೆ ಲಭಿಸಿದ ಗೌರವ ಡಿ.ಲಿಟ್

ಶೃಂಗೇರಿ : ಪರಿಸರವಾದಿ, ಹೋರಾಟಗಾರ ಕಲ್ಕುಳಿ ವಿಠ್ಠಲ್ ಹೆಗ್ಡೆ ಸೇರಿದಂತೆ ನಾಲ್ವರಿಗೆ ಗೌರವ ಡಿ.ಲಿಟ್ ಪ್ರಶಸ್ತಿ ಪುರಸ್ಕೃತಗೊಂಡಿದೆ. 

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಖ್ಯಾತ ಪರಿಸರವಾದಿ ಹಾಗೂ ಹೋರಾಟಗಾರ ಕಲ್ಕುಳಿ ವಿಠ್ಠಲ್ ಹೆಗ್ಡೆ ಸೇರಿದಂತೆ ನಾಲ್ವರಿಗೆ ಗೌರವ ಡಿ.ಲಿಟ್ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಗೌರವಿಸಿದರು. ಚಿತ್ರದುರ್ಗ ಶಿವಮೂರ್ತಿ ಮುರುಘಾ ಶರಣರು, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಕೆಂಪೇಗೌಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಬಿ.ಎಸ್.ಪುಟ್ಟಸ್ವಾಮಿ ಅವರಿಗೆ ಪದವಿ ಪ್ರಧಾನ ಮಾಡಿದರು. 

ಶ್ರೀಯುತ ಕಲ್ಕುಳಿ ವಿಠ್ಠಲ್ ಹೆಗ್ಡೆ ಅವರು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಹೋರಾಟ ಸೇರಿದಂತೆ  ಮಲೆನಾಡಿನ ಜನರಿಗೆ ಅವಶ್ಯಕವಿರುವ ಅನೇಕ ಹೋರಾಟಗಳನ್ನು ಕೈಗೆತ್ತಿಕೊಂಡು ಪ್ರತಿಭಟಿಸಿದವರು. ಅವರ ಮಳೆನಾಡು ಅಧ್ಯಯನ ಕುರಿತು ಮಂಡಿಸಿದ ಪ್ರಬಂಧಕ್ಕೆ ಈ ಪ್ರಶಸ್ತಿ ಲಭಿಸಿದೆ. 


ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆದ 30 ನೆ ನುಡಿ ಹಬ್ಬದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಈ ನಾಲ್ವರಿಗೆ ಗೌರವ ಡಿ.ಲಿಟ್ ಪದವಿನೀಡಿ ಗೌರವಿಸಿದರು.