ಚಿಕ್ಕಮಗಳೂರು :  (ನ್ಯೂಸ್ ಮಲ್ನಾಡ್ ವರದಿ) ಈ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಯುವಕನಿಗೆ ನ್ಯಾಯಾಧೀಶರು ಕಠಿಣ ಶಿಕ್ಷೆ ವಿಧಿಸಿದ್ದಾರೆ.

2020 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರದೀಪ್ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಕುರಿತು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದರು. 

ಪ್ರದೀಪ್ ಎಂಬ ಆರೋಪಿ ಅತ್ಯಾಚಾರ ಎಸಗಿದ್ದು ಆತನಿಗೆ ಚಿಕ್ಕಮಗಳೂರಿನ ಮಾನ್ಯ ಒಂದನೇ ಅಧಿಕ ಜಿಲ್ಲಾ ಹಾಗೂ FTSC - 1 ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಿದ್ದಾರೆ. 

ಈ ದಂಡದ ಹಣದಲ್ಲಿ 90,000 ರೂಪಾಯಿ ಮೊತ್ತವು ಅತ್ಯಾಚಾರಕ್ಕೀಡಾದ ನೊಂದ ಬಾಲಕಿಗೆ ಪರಿಹಾರವಾಗಿ ನೀಡಬೇಕೆಂದು ಸೂಚಿಸಿದೆ. ಈ ಪ್ರಕರಣದ ತನಿಖೆಯನ್ನು  ಈ ಹಿಂದೆ ಮೂಡಿಗೆರೆ ವೃತ್ತದ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಜಗನ್ನಾಥ ಅವರು ತನಿಖಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಗೂ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಮಮತ ಬಿ.ಎಸ್ ಅವರು ವಾದಮಾಡಿದ್ದರು.